ಮಧ್ಯಮ ವೇಗಿ ಜೋಸ್ ಹಾಜ್ಲೆವುಡ್ ಮಾರಕ ದಾಳಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 18 ರನ್ ಗಳಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡವನ್ನು ಬಗ್ಗುಬಡಿದು ಬಗ್ಗುಬಡಿದಿದೆ.
ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಆರ್ ಸಿಬಿ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಲಕ್ನೋ ಸೂಪರ್ ಗೈಂಟ್ಸ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್ ಗಳಿಸಲಷ್ಟೇ ಶಕ್ತವಾಯಿತು.
ಜೋಶ್ ಹಾಜ್ಲೆವುಡ್ ಮಾರಕ ದಾಳಿಗೆ ತತ್ತರಿಸಿದ ಲಕ್ನೋ ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವಲ್ಲಿ ವಿಫಲವಾಯಿತು. ಹಾಜ್ಲೆವುಡ್ 4 ವಿಕೆಟ್ ಪಡೆದು ಗಮನ ಸೆಳೆದರು.
ಲಕ್ನೋ ಪರ ಕೃನಾಲ್ ಪಾಂಡ್ಯ (42), ನಾಯಕ ಕೆಎಲ್ ರಾಹುಲ್ (30), ಮಾರ್ಕೂಸ್ ಸ್ಟೋನಿಸಿಸ್ (24) ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.