ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ಖಲೀಲ್ ಆಹ್ಮದ್ ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 44 ರನ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸುಲಭವಾಗಿ ಸೋಲಿಸಿದೆ.
ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 215 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಕೆಕೆಆರ್ ತಂಡ 19.4 ಓವರ್ ಗಳಲ್ಲಿ 171 ರನ್ ಗಳಿಗೆ ಆಲೌಟಾಯಿತು.

ತಂಡದ ಪರ ಶ್ರೇಯಸ್ ಅಯ್ಯರ್ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ 54 ರನ್ ಗಳಿಸಿದರೆ, ನಿತಿನ್ ರಾಣಾ 20 ಎಸೆತಗಳಲ್ಲಿ 3 ಸಿಕ್ಸರ್ ಒಳಗೊಂಡ 30 ರನ್ ಬಾರಿಸಿ ಔಟಾದರು. ಇವರಿಬ್ಬರ ಹೊರತುಪಡಿಸಿ ಉಳಿದ ಆಟಗಾರರು ವಿಫಲರಾದರು.
ಸ್ಪಿನ್ನರ್ ಕುಲದೀಪ್ ಯಾದವ್ 4 ವಿಕೆಟ್ ಪಡೆದರೆ ಖಲೀಲ್ ಅಹ್ಮದ್ 3 ವಿಕೆಟ್ ಗಳಿಸಿದರು. ಶಾರ್ದೂಲ್ ಠಾಕೂರ್ 2 ವಿಕೆಟ್ ಕಿತ್ತರು.