ಸಂಘಟಿತ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 10 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ.
ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 115 ರನ್ ಗಳಿಗೆ ಆಲೌಟಾಯಿತು.
ಸುಲಭ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ 10.4 ಓವರ್ ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಮೊದಲ ವಿಕೆಟ್ ಗೆ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ 83 ರನ್ ಪೇರಿಸಿ ತಂಡಕ್ಕೆ ಭರ್ಜರಿ ಬುನಾದಿ ಹಾಕಿಕೊಟ್ಟರು. ಶಾ 20 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 41 ರನ್ ಪೇರಿಸಿ ಚಾಹರ್ ಎಸೆತದಲ್ಲಿ ಔಟ್ ಆದರು. ವಾರ್ನರ್ 29 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 60 ರನ್ ಬಾರಿಸಿ ಔಟಾಗದೇ ಉಳಿದರು.






