ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸತತ ಸೋಲಿನ ಹಿನ್ನೆಲೆಯಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈ ಮೂಲಕ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತೆ ನಾಯಕ ಸ್ಥಾನಕ್ಕೆ ಮರಳಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ಈ ವಿಷಯ ಘೋಷಿಸಿದ್ದು, ಜಡೇಜಾ ತಮ್ಮ ಆಟದ ಮೇಲೆ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ಕಳೆದ ೮ ಪಂದ್ಯಗಳಲ್ಲಿ ೨ರಲ್ಲಿ ಮಾತ್ರ ಜಯ ಸಾಧಿಸಿದ್ದು, ಈ ಬಾರಿ ಪ್ಲೇಆಫ್ ತಲುಪುವುದು ಬಹುತೇಕ ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ಜಡೇಜಾ ಸೋಲಿನ ನೈತಿಕ ಹೊಣೆ ಹೊತ್ತು ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ.






