ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಮಾರಕ ದಾಳಿ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 17 ರನ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗುಬಡಿದು ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಅಹಮದಾಬಾದ್ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಗೆ 159 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಗೆ 142 ರನ್ ಗಳಿಸಲಷ್ಟೇ ಶಕ್ತವಾಯಿತು.
ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಿಂದ 7 ಹಾ 6 ಸೋಲಿನೊಂದಿಗೆ 14 ಅಂಕ ಸಂಪಾದಿಸಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡರೆ, ಪಂಜಾಬ್ ಕಿಂಗ್ಸ್ 13 ಪಂದ್ಯಗಳಿಂದ 6 ಜಯ ಹಾಗೂ 7 ಸೋಲಿನೊಂದಿಗೆ 12 ಅಂಕ ಗಳಿಸಿದ್ದು, ಪ್ಲೇಆಫ್ ಹಾದಿ ದುರ್ಗಮವಾಗಿಸಿಕೊಂಡಿತು.

ಪಂಜಾಬ್ ತಂಡಕ್ಕೆ ಜಾನಿ ಬೇರ್ ಸ್ಟೊ (28) ಮತ್ತು ಶಿಖರ್ ಧವನ್ (19) ಉತ್ತಮ ಆರಂಭ ನೀಡಿದರಾದರೂ ನಂತರ ನಾಟಕೀಯ ಕುಸಿತ ಅನುಭವಿಸಿ ಒತ್ತಡಕ್ಕೆ ಒಳಗಾಯಿತು.
ಮಧ್ಯಮ ಕ್ರಮಾಂಕದಲ್ಲಿ ಜತೇಶ್ ಶರ್ಮ 34 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 44 ರನ್ ಬಾರಿಸಿ ಔಟಾದರೆ, ರಾಹುಲ್ ಚಾಹರ್ 22 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 24 ರನ್ ಗಳಿಸಿ ಔಟಾಗದೇ ಉಳಿದರು.
ಮಧ್ಯಮ ಕ್ರಮಾಂಕದಲ್ಲಿ ಜಿತೇಶ್ ಪಟೇಲ್ 44 ಮತ್ತು ರಾಹುಲ್ ಚಾಹರ್ 24 ರನ್ ಗಳಿಸಿ ಹೋರಾಟ ನಡೆಸಿದ್ದು ಪ್ರಯೋಜನವಾಗಲಿಲ್ಲ.
ಶಾರ್ದೂಲ್ ಠಾಕೂರ್ 4 ವಿಕೆಟ್ ಪಡೆದು ಮಿಂಚಿದರೆ, ಅಕ್ಸರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದು ಉತ್ತಮ ಬೆಂಬಲ ನೀಡಿದರು.