ಮಾಡು ಇಲ್ಲವೇ ಮಡಿ ಎಂಬ ಸ್ಥಿತಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ.

ಗುಜರಾತ್ ಟೈಟಾನ್ಸ್ ಈಗಾಗಲೇ 20 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಪ್ಲೇಆಫ್ ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆರ್ ಸಿಬಿ ತಂಡ 13 ಪಂದ್ಯಗಳಿಂದ 7 ಜಯ ಹಾಗೂ 6 ಸೋಲಿನೊಂದಿಗೆ ೧೪ ಅಂಕ ಗಳಿಸಿ 5ನೇ ಸ್ಥಾನದಲ್ಲಿದೆ. ಅಲ್ಲದೇ ರನ್ ಸರಾಸರಿಯಲ್ಲೂ ಹಿಂದೆ ಬಿದ್ದಿರುವುದರಿಂದ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.






