ಆರಂಭಿಕ ಕ್ವಿಂಟನ್ ಡಿ ಕಾಕ್ ಸಿಡಿಸಿದ 80 ರನ್ ನೆರವಿನಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡ 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸುಲಭ ಗೆಲುವು ದಾಖಲಿಸಿದೆ.
ಅಹಮದಾಬಾದ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 149 ರನ್ ಗಳಿಗೆ ನಿಯಂತ್ರಿಸಿದ ಲಕ್ನೊ ಸೂಪರ್ ಗೈಂಟ್ಸ್ 19.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಪೈಪೋಟಿಯ ಮೊತ್ತ ಬೆಂಬತ್ತಿದ ಲಕ್ನೊ ತಂಡಕ್ಕೆ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಮೊದಲ ವಿಕೆಟ್ ಗೆ 73 ರನ್ ಜೊತೆಯಾಟ ನಿಭಾಯಿಸಿ ಉತ್ತಮ ಅಡಿಪಾಯ ಹಾಕಿದರು.
ರಾಹುಲ್ 25 ಎಸೆತಗಳಲ್ಲಿ 1 ಬೌಂಡರಿ 1 ಸಿಕ್ಸರ್ ಸಹಾಯದಿಂದ 24 ರನ್ ಗಳಿಸಿ ಔಟಾದರೆ, ಕ್ವಿಂಟನ್ ಡಿ ಕಾಕ್ 52 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 80 ರನ್ ಗಳಿಸಿ ನಿರ್ಗಮಿಸಿದರು.