ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಅವರ ಮಾರಕ ದಾಳಿ ಮತ್ತು ಜೋಸ್ ಬಟ್ಲರ್ ಅವರ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 7 ರನ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ.
ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 5 ವಿಕೆಟ್ ಗೆ 217 ರನ್ ಗಳಿಸಿತು. ಬೃಹತ್ ಮೊತ್ತ ಬೆಂಬತ್ತಿದ ಕೆಕೆಆರ್ 19.4 ಓವರ್ ಗಳಲ್ಲಿ 210 ರನ್ ಗಳಿಗೆ ಪತನಗೊಂಡಿತು.
ಆರಂಭಿಕ ಆಘಾತಕ್ಕೆ ಒಳಗಾದ ಕೆಕೆಆರ್ ತಂಡಕ್ಕೆ ಏರಾನ್ ಫಿಂಚ್ ಮತ್ತು ಶ್ರೇಯಸ್ ಅಯ್ಯರ್ 2ನೇ ವಿಕೆಟ್ 107 ರನ್ ಜೊತೆಯಾಟ ನಿಭಾಯಿಸಿ ತಂಡದ ಪರ ಹೋರಾಟ ನಡೆಸಿದರು.
![](https://pratidhvani.com/wp-content/uploads/2022/04/shreyas-iyer.jpg)
ಶ್ರೇಯಸ್ ಅಯ್ಯರ್ 51 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 85 ರನ್ ಬಾರಿಸಿ ಔಟಾದರೆ, ಏರಾನ್ ಫಿಂಚ್ 28 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 58 ರನ್ ಗಳಿಸಿ ನಿರ್ಗಮಿಸಿದರು.
ಈ ಹಂತದಲ್ಲಿ ಮಾರಕ ದಾಳಿ ಸಂಘಟಿಸಿದ ಯಜುರ್ವೆಂದ್ರ ಚಾಹಲ್ ಕೆಕೆಆರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬು ಮುರಿದು 5 ವಿಕೆಟ್ ಗೊಂಚಲು ಪಡೆದರು. ಈ ಮೂಲಕ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ 5 ವಿಕೆಟ್ ಪಡೆದ ಮೊದಲಿಗ ಎಂಬ ಗೌರವಕ್ಕೆ ಪಾತ್ರರಾದರು.