ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ ಕ್ವಾಲಿಫೈಯರ್-೨ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಅಹಮದಾಬಾದ್ ನಲ್ಲಿ ಶುಕ್ರವಾರ ನಡೆಯುವ ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದ್ದು, ವಿಜೇತ ತಂಡ ಭಾನುವಾರ ನಡೆಯುವ ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ರಾಜಸ್ಥಾನ್ ರಾಯಲ್ಸ್ ಮತ್ತು ಆರ್ ಸಿಬಿ ತಂಡಗಳು ಈ ಹಿಂದೆ ಆಡಿದ ತಂಡವನ್ನೇ ಉಳಿಸಿಕೊಂಡಿದ್ದು, ಯಾವುದೇ ಬದಲಾವಣೆ ಮಾಡಿಲ್ಲ.