ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುತ್ತಿದ್ದಂತೆ ವಿವಿಧ ಇಲಾಖೆಗಳಲ್ಲಿ ಮೇಜರ್ ಸರ್ಜರಿಗೆ ಮುಂದಾಗಿದೆ ಹಲವು ಅಧಿಕಾರಿಗಳ ಎತ್ತಂಗಡಿಗೆ ಈಗಾಗಲೇ ಚಾಲನೆ ನೀಡಿರುವ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಕೂಡ ಮೇಜರ್ ಸರ್ಜರಿಯನ್ನ ಮಾಡಿದೆ.

ಹೌದು, ಕೆಲ ಐಪಿಎಸ್ ಅಧಿಕಾರಿಗಳನ್ನು ಮಂಗಳವಾರ ವರ್ಗಾವಣೆ ಮಾಡಿ ರಾಜ್ಯಸರ್ಕಾರ ನೂತಮ ಆದೇಶವನ್ನ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ, ಎಡಿಜಿಪಿ ಮತ್ತು ಬೆಂಗಳೂರು ನಗರದ ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ನೇಮಿಸಲಾಗಿದೆ, ಗುಪ್ತಚರ ಇಲಾಖೆ ಹೆಚ್ಚುವರಿ ಡಿಜಿಪಿಯಾಗಿದ್ದ ಬಿ. ದಯಾನಂದ ಅವರನ್ನು ಎತ್ತಂಗಡಿ ಮಾಡಿ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ತನಿಖೆ ವಿಭಾಗದ ಎಡಿಜಿಪಿ ಆಗಿದ್ದ ಶರತ್ ಚಂದ್ರ ಅವರನ್ನು ಕೂಡಲೇ ಜಾರಿಗೆ ಬರುವಂತೆ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.


ಇನ್ನು ಇಂದಿನ ಈ ಬೆಳವಣಿಗೆಗಳನ್ನ ನೋಡಿದ್ರೆ ಈ ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಈ ಹಿಂದೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪೊಲೀಸ್ ಇಲಾಖೆಯೊಂದಿಗೆ ನಡೆಸಿದ ಸಭೆಯಲ್ಲಿ ಮೇಜರ್ ಸರ್ಜರಿಯ ಸುಳಿವು ನೀಡಿದ್ದು, ಇದೀಗ ಅವುಗಳನ್ನ ಕಾರ್ಯರೂಪಕ್ಕೆ ತಂದ ಹಾಗೆ ಮೇಲ್ನೋಟಕ್ಕೆ ಕಾಣಿಸುತ್ತಿದೆ