• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ಹಿಗ್ಗಾಮುಗ್ಗಾ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
August 7, 2026
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ಹಿಗ್ಗಾಮುಗ್ಗಾ ತರಾಟೆ
Share on WhatsAppShare on FacebookShare on Telegram

ಕೊಪ್ಪಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಲ್ಲಲ್ಲಿ ಅಸಮಾಧಾನ ಹೊಗೆಯಾಡುತ್ತಿದ್ದು, ಇದೀಗ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಸಚಿವ ಶಿವರಾಜ್ ತಂಗಡಗಿ, ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಅನ್ಸಾರಿ ಮಾತನಾಡಿದ್ದಾರೆ ಎನ್ನುವ ಆಡಿಯೋ ವೈರಲ್‌ ಆಗುತ್ತಿದ್ದು, ತಮ್ಮ ಸೋಲಿಗೆ ಈ ನಾಯಕರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT
Basavaraj Horatti : ಕಾಂಗ್ರೆಸ್‌ನ ಶೇ. 90 ರಷ್ಟು ಜನರ ಬೆಂಬಲ ನನಗಿದೆ, ಆದ್ರೆ ಕೆಲವರು ಹೀಗೆಲ್ಲ ಮಾಡ್ತಿದ್ದಾರೆ..

ಇತ್ತೀಚೆಗೆ ಸಚಿವ ಶಿವರಾಜ್ ತಂಗಡಗಿ, ʼಇಕ್ಬಾಲ್ ಅನ್ಸಾರಿ ಬೇರೆಯವರ ಬಗ್ಗೆ ಮಾತನಾಡುವ ಬದಲು ಜನರ ನಡುವೆ ಹೋಗಿ ಗೆದ್ದು ತೋರಿಸಲಿʼ ಎಂದು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಇಕ್ಬಾಲ್ ಅನ್ಸಾರಿ, ʼಬಹಿರಂಗ ವೇದಿಕೆಗೆ ಚರ್ಚೆಗೆ ಬನ್ನಿ. ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನು ಜನರ ಮುಂದೆ ಹೇಳುತ್ತೇನೆʼ ಎಂದು ಸವಾಲು ಹಾಕಿದ್ದಾರೆ.

ಅನ್ಸಾರಿ ಮಾತನಾಡುತ್ತಾ, ಗಂಗಾವತಿ ಕ್ಷೇತ್ರಕ್ಕೆ ಬಂದು ತಮ್ಮ ವಿರುದ್ಧ ರಾಜಕೀಯ ಮಾಡಲಾಗಿದೆ ಎಂದು ಆರೋಪಿಸಿದರು. ತಮ್ಮ ಸೋಲಿಗೆ ಶಾಸಕ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ʼನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ. ಆದರೆ ನೀವು ನನ್ನ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳ ಮತಗಳು ನನಗೆ ಸಿಗದಂತೆ ಕೆಲಸ ಮಾಡಿದ್ದೀರಿʼ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Priyank Kharge : ಕೃಷಿ ವಿವಿ ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ ಪ್ರಿಯಾಂಕ್ ಖರ್ಗೆ... #priyakkarge

ಇದೇ ವೇಳೆ ಅಧಿಕಾರಿಗಳ ವರ್ಗಾವಣೆ ವಿಚಾರವನ್ನೂ ಪ್ರಸ್ತಾಪಿಸಿದ ಅನ್ಸಾರಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿ ಅಧಿಕಾರಿಗಳು ತಮ್ಮ ಮಾತು ಕೇಳದಂತೆ ಮಾಡಿದ್ದಾರೆ ಎಂದು ಆರೋಪಿಸಿದರು. ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿಯೂ ರಾಜಕೀಯ ಪ್ರಭಾವ ಬಳಸಲಾಗಿದೆ ಎಂದು ದೂರಿದರು. ಗಂಗಾವತಿ ಕ್ಷೇತ್ರದ ನಿಗಮ-ಮಂಡಳಿಗಳಿಗೆ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹಿನ್ನೆಲೆಯವರನ್ನು ನೇಮಕ ಮಾಡಲಾಗಿದೆ ಎಂದು ಆರೋಪಿಸಿದ ಅವರು, ತಮ್ಮ ವೈಯಕ್ತಿಕ ಜೀವನದ ಬಗ್ಗೆ ಅನಗತ್ಯವಾಗಿ ಮಾತನಾಡಲಾಗುತ್ತಿದೆ ಎಂದಿದ್ದಾರೆ.

CM DK Shivakumar: ಸರ್ಕಾರಿ ಮಹಿಳಾ ನೌಕರರಿಗೆ ಸಿಎಂ ಡಿಕೆಶಿ ಗುಡ್‌ ನ್ಯೂಸ್.. #pratidhvani

ʼನಾನು ಕ್ಷೇತ್ರದಲ್ಲಿ ಪ್ರಚಾರ ಮಾಡದಿದ್ದರೆ 58 ಸಾವಿರ ಮತಗಳು ನನಗೆ ಹೇಗೆ ಬಂದವು?ʼ ಎಂದು ಪ್ರಶ್ನಿಸಿದ ಅನ್ಸಾರಿ, ಇದು ತಮ್ಮ ಮೊದಲ ಎಪಿಸೋಡ್ ಮಾತ್ರ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಯನ್ನು ದಾಖಲೆಗಳ ಸಮೇತ ಜನರ ಮುಂದೆ ಬಹಿರಂಗಪಡಿಸುವುದಾಗಿ ಆಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇಕ್ಬಾಲ್ ಅನ್ಸಾರಿ ಅವರ ಈ ಹೇಳಿಕೆಗಳು ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

 

Tags: #CabinetExpansionBJPcongressKarnatakaKarnataka PoliticsPolitics
Previous Post

ದರ್ಶನ್‌ಗೆ ಮತ್ತೆ ಸಂಕಷ್ಟ: ಇನ್ನಿಬ್ಬರು ಆರೋಪಿಗಳಿಂದ ಮಾಫಿ ಸಾಕ್ಷಿಗೆ ಅರ್ಜಿ

Next Post

Mangaluru: ವಾಲಿಬಾಲ್‌ ಆಡುತ್ತಿದ್ದ ಬಾಲಕ ಏಕಾಏಕಿ ಕುಸಿದು ಬಿದ್ದು ಸಾ**

Related Posts

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ
Top Story

ಕರ್ನಾಟಕ ಕೈಮಗ್ಗಕ್ಕೆ ಹೊಸ ಚೈತನ್ಯ: ನೇಕಾರರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌, ರಾಜ್ಯವ್ಯಾಪಿ ಅಭಿಯಾನಕ್ಕೆ ಚಾಲನೆ

by ಪ್ರತಿಧ್ವನಿ
August 7, 2026
0

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಂಬರುವ...

Read moreDetails
ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

ಬಿಜೆಪಿಯಲ್ಲಿನ ನನ್ನ ಮೆಚ್ಚಿನ ನಾಯಕ…’ ಎಂದ ರಾಹುಲ್ ಗಾಂಧಿ; ಯಾರ ಹೆಸರು ಗೊತ್ತೇ?

August 7, 2026
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ: ತಿಂಗಳುಗಳ ಕಾಲ ನಡೆದಿತ್ತು ಸಂಚು! ಸಿಬಿಐ ಆರೋಪಪಟ್ಟಿಯಲ್ಲಿ ಸ್ಫೋಟಕ ಮಾಹಿತಿ

August 7, 2026
ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

ವಿಜಯ್–ಸಂಗೀತಾ ದಾಂಪತ್ಯಕ್ಕೆ ಹೊಸ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ

August 7, 2026
ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

ಮೈದಾನದಲ್ಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾ**

August 7, 2026
Next Post
Mangaluru: ವಾಲಿಬಾಲ್‌ ಆಡುತ್ತಿದ್ದ ಬಾಲಕ ಏಕಾಏಕಿ ಕುಸಿದು ಬಿದ್ದು ಸಾ**

Mangaluru: ವಾಲಿಬಾಲ್‌ ಆಡುತ್ತಿದ್ದ ಬಾಲಕ ಏಕಾಏಕಿ ಕುಸಿದು ಬಿದ್ದು ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada