• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಇರಾನ್ ಇಸ್ರೇಲ್ ಯುದ್ಧ: ಈ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತ

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in ವಿದೇಶ
0
ಇರಾನ್ ಇಸ್ರೇಲ್ ಯುದ್ಧ: ಈ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತ
Share on WhatsAppShare on FacebookShare on Telegram

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಪ್ರಾರಂಭವಾಗಿದೆ. ಇರಾನ್ ದೇಶವು ಸುರಕ್ಷತೆಯ ದೃಷ್ಟಿಯಿಂದ ತನ್ನ ವಾಯುಪ್ರದೇಶವನ್ನು ಸಂಚಾರಕ್ಕೆ ಮುಚ್ಚಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಪರ್ಕ ತುಂಡಾಗಿದೆ.

ADVERTISEMENT
Rishab shetty : ರಾಯರ ಸನ್ನಿಧಿಯಲ್ಲಿ ಜಗ್ಗೇಶ್ ಎಂತಾ ಮಾತು ಹೇಳಿದ್ರು #pratidhvani

 

ಶನಿವಾರದಂದು ಮಂಗಳೂರಿನಿಂದ ಹೊರಡಬೇಕಿದ್ದ ಮತ್ತು ಆಗಮಿಸಬೇಕಿದ್ದ ಬಹುತೇಕ ಎಲ್ಲಾ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಇರಾನ್ ವಾಯುಮಾರ್ಗವು ಗಲ್ಫ್ ರಾಷ್ಟ್ರಗಳಿಗೆ ಹೋಗುವ ಪ್ರಮುಖ ಕೊಂಡಿಯಾಗಿದೆ. ಅದು ಬಂದ್ ಆಗಿರುವುದರಿಂದ ಪರ್ಯಾಯ ಮಾರ್ಗಗಳಿಲ್ಲದೆ ಹಲವು ವಿಮಾನಗಳು ರದ್ದಾಗಿವೆ.

HD Kumaraswamy: ಧಾರವಾಡದಲ್ಲಿ ವಿದ್ಯಾರ್ಥಿಗಳ ಪ್ರೊಟೆಸ್ಟ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ! #pratidhvani

ವಿಮಾನಗಳು ಬೇರೆ ದೀರ್ಘವಾದ ಮಾರ್ಗವನ್ನು ಅನ್ವೇಷಿಸಬೇಕಿದೆ. ಆದರೆ ದೀರ್ಘ ಮಾರ್ಗಕ್ಕೆ ಹೆಚ್ಚಿನ ಇಂಧನ ಮತ್ತು ಸಮಯದ ಅಗತ್ಯವಿರುವುದರಿಂದ ಸದ್ಯಕ್ಕೆ ವಿಮಾನಯಾನ ಸಂಸ್ಥೆಗಳು ಹಾರಾಟವನ್ನು ಸ್ಥಗಿತಗೊಳಿಸಿವೆ.ನಾಗರಿಕ ವಿಮಾನಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ಹಾಗೂ ಸುತ್ತಮುತ್ತಲಿನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಬೆಳವಣಿಗೆಯ ಪರಿಣಾಮವಾಗಿ ಅನೇಕ ಅಂತರಾಷ್ಟ್ರೀಯ ವಿಮಾನಗಳು ಮಾರ್ಗ ಬದಲಾಯಿಸಲು ಅಥವಾ ಹಾರಾಟ ರದ್ದುಪಡಿಸಲಾಗಿದೆ.

Rahul Gandhi : ನನಗೆ ಲೋಕಸಭೆಯಲ್ಲಿ ಮಾತನಾಡೋಕೆ ಅವಕಾಶ ನೀಡಿಲ್ಲ..!  #pmmodi #trump #donaldtrump

ಮಂಗಳೂರಿನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 831). ಈ ವಿಮಾನ ನಿಗದಿತ ಸಮಯದಲ್ಲಿ ಮಂಗಳೂರಿನಿಂದ ಟೇಕಾಫ್ ಆಗಿತ್ತಾದರೂ, ಇರಾನ್ ವಾಯುಮಾರ್ಗ ಲಭ್ಯವಿಲ್ಲದ ಕಾರಣ ಅರ್ಧ ದಾರಿಯಿಂದಲೇ ಮತ್ತೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಮರಳಿದೆ. ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಈ ವಿಮಾನವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ ಎಂದು ಘೋಷಿಸಲಾಯಿತು. ವಿಮಾನದಲ್ಲಿದ್ದ 174 ಪ್ರಯಾಣಿಕರು ಮತ್ತು 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿ ಇಳಿದು ಸ್ವಸ್ಥಾನಕ್ಕೆ ವಾಪಸಾಗಿದ್ದಾರೆ.

 

ಮಂಗಳೂರಿನಿಂದ ದೋಹಾಕ್ಕೆ ತೆರಳುತ್ತಿದ್ದ ಮತ್ತೊಂದು ವಿಮಾನ IX 821 ಅನ್ನು ತುರ್ತಾಗಿ ಮುಂಬೈ (BOM) ವಿಮಾನ ನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ. ವಾಯುಮಾರ್ಗದ ಬದಲಾವಣೆಯಿಂದಾಗಿ ಇಂಧನ ಕೊರತೆ ಅಥವಾ ಭದ್ರತಾ ಕಾರಣಗಳಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಇಂಡಿಗೋ ಸಂಸ್ಥೆಯ ಮಂಗಳೂರು-ದುಬೈ (6E 1467) ವಿಮಾನವನ್ನು ಕೂಡ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

Rahul Gandhi : ರಾಹುಲ್ ಗಾಂಧಿ ಆ ಮಾತಿಗೆ ಶಾಕ್ ಆದ ಜನರು..! #wayanad #kerala #rahulgandhi

 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಲ್ಫ್‌ಗೆ ಹೋಗಲು ಸಜ್ಜಾಗಿದ್ದ ನೂರಾರು ಪ್ರಯಾಣಿಕರು ಈಗ ಅನಿಶ್ಚಿತತೆಯಲ್ಲಿ ಸಿಲುಕಿದ್ದಾರೆ. ವೀಸಾ ಅವಧಿ ಮುಗಿಯುವ ಹಂತದಲ್ಲಿರುವವರು ಮತ್ತು ತುರ್ತು ಕೆಲಸಗಳಿಗಾಗಿ ತೆರಳಬೇಕಿದ್ದವರು ಆತಂಕ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ತಿಳಿಯಾಗುವವರೆಗೆ ವಿಮಾನ ಸಂಚಾರ ಸಹಜ ಸ್ಥಿತಿಗೆ ಬರುವುದು ಕಷ್ಟ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

DK Shivakumar : ಗೃಹಲಕ್ಷ್ಮಿ ಹಣ ಬಗ್ಗೆ ಡಿಕೆ ಶಿವಕುಮಾರ್‌ ಹಳಿದ್ದೇನು..! #congress #gruhalakshmi

ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದಿಸುತ್ತೇವೆ. ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

Tags: flightiran israel warmanglore
Previous Post

ಮೂರನೇ ವಿಶ್ವಯುದ್ಧ : ಇರಾನ್‌ ಮೇಲೆ ಇಸ್ರೇಲ್‌, ಅಮೆರಿಕ ಅಟ್ಯಾಕ್ ; ಖಮೇನಿ ಎಲ್ಲಿ..?

Next Post

ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್ ಸಂಪೂರ್ಣ ಭಸ್ಮ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

ಇರಾನ್‌ಗೆ ಅಮೆರಿಕಾ–ಇಸ್ರೇಲ್ ಕಠಿಣ ಎಚ್ಚರಿಕೆ: ಒಪ್ಪಂದ ಒಪ್ಪಿಕೊಳ್ಳಿ ಇಲ್ಲದಿದ್ದರೆ ಪರಿಣಾಮ ಗಂಭೀರ

April 17, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಇರಾನ್ ಇಸ್ರೇಲ್ ಯುದ್ಧ: ಈ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತ

ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್ ಸಂಪೂರ್ಣ ಭಸ್ಮ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada