ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಚಿತ್ರರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಅಭಿನಯದ ಕೋಬ್ರಾ ಚಿತ್ರವು ಸದ್ಯದಲ್ಲೇ ತೆರೆ ಕಾಣಲಿದೆ.
ಆಕ್ಷನ್ ಥ್ರಿಲ್ಲರ್ ಚಿತ್ರವಾದ ಕೋಬ್ರಾ ಟ್ರೇಲರ್ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು ವಿಕ್ರಂ ಜೊತೆಗೆ ಇರ್ಫಾನ್ ಕೂಡ ತಮ್ಮ ನಟನೆಯೊಂದಿಗೆ ಗಮನ ಸೆಳೆಯುತ್ತಾರೆ.
ಟ್ರೈಲರ್ ವೀಕ್ಷಿಸಿದ ಪ್ರತಿಯೊಬ್ಬರು ಸಹ ಚಿತ್ರತಂಡಕ್ಕೆ ಶುಭ ಹಾರೈಸಿದ್ದು ಇರ್ಫಾನ್ ನಟನೆಯನ್ನು ಹಾಡಿ ಹೊಗಳಿದ್ದಾರೆ.
ಈಗಾಗಲೇ ತಮಿಳು ಚಿತ್ರರಂಗದಲ್ಲಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಶ್ರೀಶಾಂತ್ ತಮ್ಮ ಅಭಿನಯದ ಮೂಲಕ ಅಭಿಮಾನಿ ಬಳಗವನ್ನ ಹೊಂದಿದ್ದಾರೆ.
ಕೋಬ್ರಾ ಚಿತ್ರದಲ್ಲಿ ನಾಯಕನಾಗಿ ವಿಕ್ರಮ್ ನಟಿಸಿದ್ದು ನಾಯಕಿಯರಾಗಿ KGF ಖ್ಯಾತಿಯ ಶ್ರೀನಿಧಿ ಶೆಟ್ಟಿ, ಮೃನಾಲಿನಿ ರವಿ ನಟಿಸಿದ್ದಾರೆ. ಚಿತ್ರಕ್ಕೆ ಅಜಯ್ ಜ್ಞಾನಮುತ್ತು ಆಕ್ಷನ್ ಕಟ್ ಹೇಳಿದ್ದು ಚಿತ್ರ ಆಗಸ್ಟ್ 31ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.