ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ಸಂಬಂಧ ಸೋಮವಾರ (ಆಗಸ್ಟ್ 7) ಸಭೆ ನಡೆಯಲಿದ್ದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ಎಸ್ನಲ್ಲಿ ನಡೆಯುವ ಸಭೆಯಲ್ಲಿ ರಾಜ್ಯದ ಜನರಿಗೆ ಕಾವೇರಿ ನದಿಯ ನೀರು ನೀಡಲು ಒತ್ತಡ ಇದೆ. ಕೆಆರ್ಎಸ್ ಅಣೆಕಟ್ಟಿಗೆ ಒಳಹರಿವು ನಿಂತುಹೋಗಿದೆ. ಆದ್ದರಿಂದ ಅಗತ್ಯಕ್ಕಿಂತ ಹೆಚ್ಚು ನೀರು ಇಲ್ಲ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ತೀರ್ಪಿನಂತೆ ತಮಿಳುನಾಡಿಗೆ ನೀರು ಹರಿಸಲಾಗುವುದು. ಕಾವೇರಿ ನದಿಯ ನೀರು ಬಿಡುವ ಬಗ್ಗೆ ಸಭೆಯಲ್ಲಿ ಎಲ್ಲಾ ಶಾಸಕರು, ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಇನ್ನು ಮುಂದೆ ಖಾಸಗಿ ಲೇಔಟ್ ಗಳಿಗೆ ಲೈಸನ್ಸ್ ಇಲ್ಲ : ಸಚಿವ ಭೈರತಿ ಸುರೇಶ್
ಕಾವೇರಿ ನದಿ ನೀರಿನ ಮಟ್ಟದ ಸ್ಥಿತಿಯ ಬಗ್ಗೆ ತಮಿಳುನಾಡು ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಅಲ್ಲಿಗೆ ತೆರಳಿ ಮಾತನಾಡಿದ್ದಾರೆ. ಸಭೆಯ ನಂತರ ಮುಂದಿನ ನಡೆ ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು.