ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Cm siddaramaiah) ದೆಹಲಿಯಲ್ಲೇ ಕುಳಿತು ಹೊಸ ದಾಳ ಉರುಳಿಸಿದ್ದಾರೆ. ಸಿಎಂ ಬದಲಾವಣೆ ಚರ್ಚೆಗೆ ಟಕ್ಕರ್ ಕೊಟ್ಟಿರುವ ಸಿದ್ದು,ಐದು ವರ್ಷಕ್ಕೂ ತಾನೇ ಸಿಎಂ ಎಂಬ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ.
ಆದ್ರೆ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (Dcm Dk Shivakumar), ಸಿದ್ದು ಈ ಹೇಳಿಕೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿದೆ ಮೌನಕ್ಕೆ ಜಾರಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬಳಿಕ ಸಿಎಂ ದಿದ್ದು ದೆಹಲಿಯಲ್ಲೇ ಉಳಿದಿದ್ದು ಇಂದು ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ. ಆದ್ರೆ ನಿನ್ನೆ ರಾತ್ರಿಯೇ
ದೆಹಲಿಯಿಂದ ಹೊರಟ ಡಿಸಿಎಂ ಡಿಕೆಶಿ ಮಾತ್ರ ಮೌನವಾಗಿ ರಾತ್ರಿ ಗಂಟೆ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಇಷ್ಟೆಲ್ಲಾ ಬೆಳವಣಿಗೆಯ ನಂತರ ರಾಜ್ಯ ಉಸ್ತುವಾರಿ ಸುರ್ಜೆವಾಲ ಜೊತೆ ಕೂಡ ಸಿಎಂ
ಸಿದ್ದರಾಮಯ್ಯ ಕೆಲ ಕಾಲ ಚರ್ಚೆ ನಡೆಸಿದ್ದು, ಈ ಸಭೆಯ ಮುಕ್ತಾಯದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಜೊತೆಗೆ ಕೂಡ ಸಿಎಂ ಸಿದ್ದರಾಮಯ್ಯ ಒನ್ ಟು ಒನ್ ಮಾತುಕತೆ ನಡೆಸಿದ್ದಾರೆ. ಈ ಬೆಳವಣಿಗೆಯಿಂದ ಡಿಕೆ ವಿಚಲಿತಗೊಂಡಿದ್ದಾರಾ..? ಎಂಬ ಚರ್ಚೆ ಗರಿಗೆದರಿದೆ.