
ನಾನು ಕಾಂಗ್ರೆಸ್ನಲ್ಲಿ ಅಧ್ಯಕ್ಷ ಆಗ್ಬೇಕು, ಮುಖ್ಯಮಂತ್ರಿ ಆಗ್ಬೇಕು ಅಂತಾ ನೇರವಾಗಿಯೇ ಹೇಳಿಕೆ ನೀಡಿದ್ದ ಸಾಹುಕಾರ್ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಕುರ್ಚಿ ಮೇಲೆ ಕೂರೋದು ಫಿಕ್ಸ್ ಆಗಿದ್ಯಾ..? ಅನ್ನೋ ಅನುಮಾನ ಮೂಡ್ತಿದೆ. ಮೊನ್ನೆ ಮೊನ್ನೆಯಷ್ಟೇ ದೆಹಲಿಗೆ ತೆರಳಿದ್ದ ಸಚಿವ ಸತೀಶ್ ಜಾರಕೀಹೊಳಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿದ್ರು. ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ಜನರನ್ನ ಭೇಟಿಯಾಗಿದ್ರು. ಈ ವೇಳೆ ಸಚಿವರು, ಹಿರಿಯ ಶಾಸಕರ ಬೆಂಬಲ ಪಡೆಯುವಂತೆ ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ವರಿಷ್ಠ ನಾಯಕರ ಸೂಚನೆಯಂತೆ ರಾಜ್ಯಕ್ಕೆ ವಾಪಸ್ ಆಗಿರುವ ಸಚಿವ ಸತೀಶ್ ಜಾರಕಿಹೊಳಿ, ಫುಲ್ ಆ್ಯಕ್ಟೀವ್ ಆಗಿದ್ದಾರೆ. ದೆಹಲಿಯಿಂದ ವಾಪಸ್ ಆದ ಬಳಿಕ ಸಚಿವರಾದ ಮಹದೇವಪ್ಪ, ಡಾ. ಪರಮೇಶ್ಚರ್, ಕೆ.ಜೆ ಜಾರ್ಜ್, ಜಮೀರ್ ಅಹಮದ್ ಖಾನ್ ಜೊತೆ ರಹಸ್ಯ ಮಾತುಕತೆ ನಡೆಸಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಆಗ್ತಿದ್ದಂತೆ ಕಾಂಗ್ರೆಸ್ನ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.. ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಒಬ್ಬರೇ ಕೂರಲು ಸಾಧ್ಯವಿಲ್ಲ. ಡಿ.ಕೆ ಶಿವಕುಮಾರ್ ಕೂಡ ಒಳ್ಳೆಯ ಕೆಲಸ ಮಾಡಿದ್ದಾರೆ. ಹೈಕಮಾಂಡ್ ಯಾವುದೇ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳಲ್ಲ ಅನ್ನೋ ವಿಶ್ವಾಸ ಇದೆ ಅಂತ ಹೇಳಿದ್ರು.
ಇನ್ನು ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಚಾರದ ಬಗ್ಗೆ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.. ಅಧ್ಯಕ್ಷರ ನೇಮಕ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು.. ನಾವು ಮಾತನಾಡೋದ್ರಲ್ಲಿ ಅರ್ಥ ಇಲ್ಲ. ಎಲ್ಲರೂ ದೆಹಲಿಗೆ ಹೋಗ್ತಾರೆ. ಪಕ್ಷದ ವರಿಷ್ಠರನ್ನ ಭೇಟಿ ಮಾಡಲು ಹೋಗ್ತಾರೆ. ಅವರ ಬಳಿ ಹೇಳುವ ವಿಚಾರ ಬಹಳಷ್ಟು ಇರುತ್ತದೆ. ಎಲ್ಲರ ಅಭಿಪ್ರಾಯ, ಸಲಹೆ ಪಡೆಯೋದು ಇದ್ದೇ ಇರುತ್ತದೆ ಅಂತ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಇದೇ ವಿಚಾರವಾಗಿ ತುಮಕೂರಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಈ ಬಗ್ಗೆ ನನಗೇನು ಗೊತ್ತಿಲ್ಲಪ್ಪ ಎಂದಿದ್ದಾರೆ. KPCC ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಬಳ್ಳಾರಿಯಲ್ಲಿ ಸಂಸದ ಈ ತುಕಾರಾಂ ಪ್ರತಿಕ್ರಿಯೆ ನೀಡಿದ್ದು, ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ.. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದ ಎಂದಿದ್ದಾರೆ.. ನಮ್ಮ ಹೈಕಮಾಂಡ್ ಕೊಟ್ಟ ಜವಾಬ್ದಾರಿ ನಿವಾಹಿಸುವುದು ಅಷ್ಟೇ ನಮ್ಮ ಕೆಲಸ ಎಂದಿದ್ದಾರೆ.