ಮಂಡ್ಯದಲ್ಲಿ (Mandya ) ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa), KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tippu sultan) ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿ ಮಾಡಿದ್ದಾರೆ. ಕನ್ನಂಬಾಡಿ ಕಟ್ಟೊದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು.ಆದರೆ ಈಗ ಅದನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ ಎಂದಿದ್ದರು.

ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಅವರ ಪುಣ್ಯ ಸ್ಮರಣೆ ದಿನದಂದೇ ಸಚಿವರ ಈ ಹೇಳಿಕೆ ತೀವ್ರ ಆಕ್ರೋಶ ಮತ್ತು ಟೀಕೆಗಳಿಗೆ ಗುರಿಯಾಗಿದೆ. ಟಿಪ್ಪು ಸುಲ್ತಾನ್ ಹೊಗಳುವ ಭರದಲ್ಲಿ ಮೈಸೂರು ಅರಸರ ಸಾಧನೆಯನ್ನು ಹೆಚ್.ಸಿ ಮಹದೇವಪ್ಪ ಕಡೆಗಣನೆ ಮಾಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಈಗ ಇದೇ ವಿಚಾರ ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸುತ್ತಿದೆ.

ಕೆಲವೇ ದಿನಗಳ ಮುನ್ನ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ತಮ್ಮ ತಂದೆಯನ್ನು ಹೊಗಳುವ ಭರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗಿಂತ ಸಿದ್ದರಾಮಯ್ಯ ಕೊಡುಗೆ ಹೆಚ್ಚು ಎಂದು ಹೇಳುವ ಮೂಲಕ ಪೇಚಿಗೆ ಸಿಲುಕಿದ್ದರು. ಈ ಬೆನ್ನಲೇ ಹೆಚ್.ಸಿ ಮಹದೇವಪ್ಪ ಈ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೈಸೂರು ಅರಸರ ಕೊಡುಗೆಗಳನ್ನು ಕಾಂಗ್ರೆಸ್ ಕಡೆಗಮಿಸುವ ಮೂಲಕ ಅಗೌರವ ತೋರುತ್ತಿದೆ ಎಂದು ಜರಿದಿದೆ.