• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದಲಿತರ ಕಲ್ಯಾಣಕ್ಕಾಗಿ ಹಣ ಮೀಸಲಿಡಲು BJP ಸರ್ಕಾರ ಸಿದ್ದ ಇದೆಯೇ? : ಸಿದ್ದರಾಮಯ್ಯ ಸವಾಲು

Any Mind by Any Mind
November 4, 2021
in ಕರ್ನಾಟಕ, ರಾಜಕೀಯ
0
ಮೈಸೂರಿನ ಪ್ರತಿ ದಲಿತರ ಮನೆಯಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರವಿತ್ತು : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾಕೆ ಗೊತ್ತೇ?
Share on WhatsAppShare on FacebookShare on Telegram

ನಾನು ದಲಿತರನ್ನು ಅವಮಾನಿಸಿದ್ದೇನೆ ಎಂಬ ಸುಳ್ಳು ಆರೋಪದ ಮೂಲಕ ಅತ್ಯಂತ ಕೀಳುಮಟ್ಟದ ಆರೋಪಗಳನ್ನು ಬಿಜೆಪಿ ದಲಿತ ಮೋರ್ಚಾದ ಕೆಲವು ನಾಯಕರು ಮಾಡಿರುವುದನ್ನು ಮಾಧ್ಯಮಗಳ ವರದಿಗಳ ಮೂಲಕ ಗಮನಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಸಿಂದಗಿಯಲ್ಲಿ ನಡೆದಿದ್ದ ಮಾದಿಗ ದಂಡೋರಾ ಸಭೆಯಲ್ಲಿ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ, ನಾರಾಯಣ ಸ್ವಾಮಿ ಮೊದಲಾದ ನಾಯಕರು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಬಿಜೆಪಿ ಜೊತೆ ಸ್ವಾರ್ಥಕ್ಕಾಗಿ ಸೇರಿದ್ದಾರೆ ಎಂದು ಹೇಳಿದ್ದೆ ಹೊರತು ಎಲ್ಲಿಯೂ ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹೇಳಿಲ್ಲ. ಆ ದಿನದ ಭಾಷಣದ ವಿಡಿಯೋ ಕೂಡಾ ಲಭ್ಯವಿದೆ ಎಂದು ಹೇಳಿದ್ದಾರೆ.

ನನ್ನನ್ನು ದಲಿತ ವಿರೋಧಿ ಎಂದು ಚಿತ್ರಿಸಲು ಹೊರಟಿರುವ ಬಿಜೆಪಿ ದಲಿತ ಮೋರ್ಚಾದ ನಾಯಕರು, ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುತ್ತೇವೆ ಎಂದಾಗ, ದಲಿತರನ್ನು ನಾಯಿಗಳು ಎಂದು ತುಚ್ಚೀಕರಿಸಿದಾಗ ಎಲ್ಲಿ ಹೋಗಿದ್ದರು? ಯಾಕೆ  ಬಾಯಿ ಮುಚ್ಚಿಕೊಂಡಿದ್ದರು? ಯಾಕೆ ಪ್ರತಿಭಟಿಸಲಿಲ್ಲ?  ಎನ್ನುವುದನ್ನು ಕೂಡಾ ರಾಜ್ಯದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜಕೀಯ ಅಧಿಕಾರ ಎನ್ನುವುದು ಅಭಿವೃದ್ದಿಯ ಬಾಗಿಲನ್ನು ತೆರೆಯುವ ಮಾಸ್ಟರ್ ಕೀ’ ಎನ್ನುವ ಬಾಬಾಸಾಹೇಬ್ ಅಂಬೇಡ್ಕರ್ ಮಾತನ್ನು ಸಂಪೂರ್ಣವಾಗಿ ನಾನು ನಂಬಿದವನು. ನನ್ನ ಕೈಗೆ ಅಧಿಕಾರ ಬಂದಾಗೆಲ್ಲ ಅದನ್ನು ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವೂ ಸೇರಿದಂತೆ ಸರ್ವಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇನೆ. ಇವೆಲ್ಲವೂ ಅಧಿಕೃತ ದಾಖಲೆಯ ರೂಪದಲ್ಲಿ ಜನರ ಮುಂದಿದೆ. ಇದೇ ರೀತಿ ಭಾರತೀಯ ಜನತಾ ಪಕ್ಷ ತಮ್ಮ ಕೈಗೆ ಅಧಿಕಾರ ಬಂದಾಗ ಏನು ಮಾಡಿದೆ ಎನ್ನುವುದು ಕೂಡಾ ದೇಶ ಮತ್ತು ರಾಜ್ಯದ ಜನತೆಯ ಮುಂದಿದೆ ಎಂದು ಹೇಳಿದ್ದಾರೆ.

ದಲಿತರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ರಚಿಸಿದ್ದ ಕಾಯ್ದೆಗಳು, ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಮುಂದಿಟ್ಟು ಸಾರ್ವಜನಿಕವಾಗಿ ಚರ್ಚೆ ನಡೆಸಿದರೆ ನಾನು ಅದರಲ್ಲಿ ಭಾಗವಹಿಸಲು ಸಿದ್ದನಿದ್ದೇನೆ. ಈ ಮೂಲಕ ಯಾವ ಪಕ್ಷ ದಲಿತರ ಪರವಾಗಿದೆ ಮತ್ತು ವಿರುದ್ದವಾಗಿದೆ ಎನ್ನುವುದನ್ನು ಸಾರ್ವಜನಿಕರ ತೀರ್ಮಾನಿಸಲಿ ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ ನ ಶೇಕಡಾ 24.1ರಷ್ಟು ಭಾಗವನ್ನು ಮೀಸಲಿಡುವ ಮೂಲಕ SCSP/TSP  ಕಾಯ್ದೆಯನ್ನು ನಾನು ಜಾರಿಗೆ ತಂದಿದ್ದೆ. ಆಂಧ್ರಪ್ರದೇಶ ಸರ್ಕಾರದಲ್ಲಿ ಇದೇ ಉದ್ದೇಶ ಕಾಯ್ದೆಯಿದ್ದರೂ ನಾವು ರಚಿಸಿದ ಕಾಯ್ದೆ ಹೆಚ್ಚು ಪ್ರಗತಿಪರವಾದುದು, ನಮ್ಮಲ್ಲಿನ ಕಾಯ್ದೆಯ ಪ್ರಕಾರ ಮೀಸಲಿಟ್ಟ ಶೇಕಡಾ 24.ರಷ್ಟು ಬಜೆಟ್ ಹಣ ಖರ್ಚಾಗದಿದ್ದರೆ ಅದನ್ನು ಮುಂದಿನ ವರ್ಷಕ್ಕೆ ಬಳಸಬಹುದಾಗಿದೆ ಮತ್ತು. ಮೀಸಲಿಟ್ಟ ಅನುದಾನವನ್ನು ಖರ್ಚು ಮಾಡದ ಸಂಬಂಧಿತ ಇಲಾಖಾ ಅಧಿಕಾರಿಗಳ ವಿರುದ್ದ ಕ್ರಮವನ್ನು ಕೈಗೊಳ್ಳಬಹುದಾಗಿದೆ.

2008-09ರಿಂದ 2012-13ನೇ ಸಾಲಿನವರೆಗೆ ಬಿಜೆಪಿ ಸರ್ಕಾರ SCSP/TSP  ಯೋಜನೆಯಡಿ ಖರ್ಚು ಮಾಡಿದ್ದು ಕೇವಲ ರೂ.22,261 ಕೋಟಿ. ನಮ್ಮ ಸರ್ಕಾರದ ಅವಧಿಯಲ್ಲಿ ರೂ. 88,395 ಕೋಟಿ. ಯಾರು ದಲಿತ ವಿರೋಧಿ? ನಾನಾ? ಬಿಜೆಪಿ ನಾಯಕರಾ? ಎಂದು ಪ್ರಶ್ನಿಸಿದ್ದಾರೆ.

2020-21ರ ಕೇಂದ್ರ ಬಜೆಟ್ ನ ಗಾತ್ರ 34 ಲಕ್ಷ ಕೋಟಿ ರೂಪಾಯಿಗಳು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಈ ಬಜೆಟ್ ನ ಶೇಕಡಾ 24ರಷ್ಟನ್ನು ಅವರ ಕಲ್ಯಾಣಕ್ಕಾಗಿ ಮೀಸಲಿಟ್ಟರೆ ಅದು ಎಂಟುವರೆ ಲಕ್ಷ ಕೋಟಿ ರೂಪಾಯಿಗಳಾಗುತ್ತದೆ. ನನ್ನನ್ನು ದಲಿತ ವಿರೋಧಿ ಎಂದು ಆರೋಪಿಸುವವರು ಪ್ರಧಾನಿ ನರೇಂದ್ರಮೋದಿಯವರಿಗೆ ಮನವರಿಕೆ ಮಾಡಿಕೊಟ್ಟು ರಾಜ್ಯದಲ್ಲಿ ನಾನು ಜಾರಿಗೆ ತಂದಿದ್ದ SCP/TSP ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರುವಂತೆ ಮಾಡಲು ಸಿದ್ದರಿದ್ದಾರೆಯೇ? ಇದು ಬಿಜೆಪಿಯಲ್ಲಿರುವ ದಲಿತ ನಾಯಕರಿಗೆ ನನ್ನ ಸವಾಲು ಎಂದು ಸವಾಲೆಸಿದಿದ್ದಾರೆ.

2020-21ರ  ಕೇಂದ್ರ ಬಜೆಟ್ ನಲ್ಲಿ ಪರಿಶಿಷ್ಟ ಜಾತಿಯ ಕಲ್ಯಾಣಕ್ಕೆ ನೀಡಿರುವ ಅನುದಾನ ರೂ.8030 ಕೋಟಿ ಮತ್ತು ಗುಡ್ಡಗಾಡು ಜನರ ಅಭಿವೃದ್ದಿಗೆ ನೀಡಿರುವ ಅನುದಾನ ರೂ.7524 ಕೋಟಿ. ಬೇರೆ ಯಾವ ಕಾರ್ಯಕ್ರಮಗಳನ್ನು ಪ್ರತ್ಯೇಕವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಾಗಿ ಕೇಂದ್ರ ಸರ್ಕಾರ ನೀಡಿದೆ ಎನ್ನುವುದನ್ನು ಬಿಜೆಪಿ ನಾಯಕರೇ ತಿಳಿಸಬೇಕು.

ಪರಿಶಿಷ್ಟ ಜಾತಿ/ಪಂಗಡದ ಸರ್ಕಾರಿ ನೌಕರರ ಮುಂಬಡ್ತಿ ಸೌಲಭ್ಯವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದಾಗ ಕಣ್ಣು ಮುಚ್ಚಿಕೂತಿದ್ದರು ಬಿಜೆಪಿಯ ದಲಿತ ನಾಯಕರು. ಸುಗ್ರೀವಾಜ್ಞೆ ಮೂಲಕ ಆ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಿದ್ದು ನಮ್ಮ ಸರ್ಕಾರ . ಈಗ ನನ್ನ ವಿರುದ್ದ ಘೋಷಣೆ ಕೂಗುತ್ತಿರುವ ಕೆಲವು ನಾಯಕರೇ ನನ್ನ ಪರವಾಗಿ ಜೈಕಾರ ಹಾಕಿದ್ದರು.

ಪರಿಶಿಷ್ಟ ಜಾತಿ/ಪಂಗಡದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಕಾಮಗಾರಿಗಳಲ್ಲಿ ಶೇಕಡಾ 18ರಷ್ಟು ಮೀಸಲಾತಿ ನೀಡಿ ಕೆಟಿಟಿಪಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದು ನಮ್ಮ ಸರ್ಕಾರ. ದೇಶದಲ್ಲಿ ಯಾವ ಸರ್ಕಾರ ಕೂಡಾ ನೀಡದೆ ಇದ್ದ ಸೌಲಭ್ಯವನ್ನು ಮೊದಲ ಬಾರಿಗೆ ಜಾರಿಗೆ ತಂದದ್ದು ನಮ್ಮ ಸರ್ಕಾರ. ಬಿಜೆಪಿ ದಲಿತರ ಪರ ಎಂದು ಹೇಳುತ್ತಿರುವ ನಾಯಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ದಲಿತರಿಗೆ ಈ ಅನುಕೂಲವನ್ನು ಮಾಡಿಕೊಡಲು ಸಾಧ್ಯವಿದೆಯೇ?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ (2008-2013) ಪರಿಶಿಷ್ಟ ಜಾತಿ/ಪಂಗಡಗಳ ಆಶ್ರಮ ಶಾಲೆ,ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಹಾರಕ್ಕಾಗಿ ಮಾಸಿಕವಾಗಿ ನೀಡುತ್ತಿದ್ದ ಹಣ ರೂ.600, ರೂ. 750 ಮತ್ತು ರೂ.850. ಅದನ್ನು ಕ್ರಮವಾಗಿ ರೂ.1300,ರೂ.1500 ಮತ್ತು ರೂ.1600ಕ್ಕೆ ಹೆಚ್ಚಿಸಿದ್ದು ನಮ್ಮ ಸರ್ಕಾರ.

ನಮ್ಮ ಸರ್ಕಾರ ಹೋಬಳಿಗೊಂದು ಪ.ಜಾ/ಪ.ಪಂ ವಸತಿ ಶಾಲೆಯಂತೆ 270 ಹೊಸ ವಸತಿ ಶಾಲೆ ಹಾಗೂ 200 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿತ್ತು.. ಇದರಿಂದ 74,300 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಪ್ರವೇಶಾವಕಾಶ ಸಿಕ್ಕಿದೆ. ಬಿಜೆಪಿ ಸರ್ಕಾರದ ಸಾಧನೆ ಏನು? ಎಂದು ಪ್ರಶ್ನಿಸಿದ್ದಾರೆ.

ಪ.ಜಾ/ಪ.ಪಂ. ಉದ್ಯಮಿಗಳಿಗೆ  KSFC  ಮೂಲಕ ಶೇ.4 ರ ಬಡ್ಡಿಯಲ್ಲಿ ರೂ.10 ಕೋಟಿ ವರೆಗೆ ಸಾಲ. ಈ ಸೌಲಭ್ಯ ರಾಷ್ಟ್ರೀಕೃತ ಬ್ಯಾಂಕುಗಳಿಗೂ ವಿಸ್ತರಣೆ. ಈ ಮೂಲಕ 1,597 ಉದ್ಯಮಿಗಳಿಗೆ 908 ಕೋಟಿ ರೂ. ಸಾಲ. ದಲಿತರಲ್ಲಿ ಉದ್ಯಮಶೀಲತೆಯನ್ನು ಬೆಳೆಸುವ ಉದ್ದೇಶದ ಇಂತಹ ಯಾವ ಯೋಜನೆಗಳನ್ನು ಬಿಜೆಪಿ ಸರ್ಕಾರ ರೂಪಿಸಿದೆ ಎಂದು ಆ ಪಕ್ಷದ ದಲಿತ ನಾಯಕರು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ.ಜಾ/ಪ.ಪಂ ಸಮುದಾಯದ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ/ಅತಿ ಸೂಕ್ಷ್ಮ 72 ಸಮುದಾಯಗಳನ್ನು ಗುರುತಿಸಿ ರೂ.222 ಕೋಟಿ ವೆಚ್ಚದಲ್ಲಿ ಅವರ ಶೈಕ್ಷಣಿಕ  ಮತ್ತು ಆರ್ಥಿಕ ಅಭಿವೃದ್ದಿಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದು ನಮ್ಮ ಸರ್ಕಾರ.

ನಮ್ಮ ಸರ್ಕಾರ  840 ಕೋಟಿ ರೂ. ವೆಚ್ಚದಲ್ಲಿ  ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನರಾಂ  ಮತ್ತು  ಮಹರ್ಷಿ ವಾಲ್ಮೀಕಿ ಯವರ ಹೆಸರಲ್ಲಿ 8,199 ಭವನಗಳ ನ್ನು ನಿರ್ಮಿಸಿತ್ತು. ನನ್ನನ್ನು ದಲಿತ ವಿರೋಧಿ ಎಂದು ಹೇಳುವವರು ಬಿಜೆಪಿ ಕಾಲದಲ್ಲಿ ಕಟ್ಟಿದ್ದೆಷ್ಟು ಎಂದು ಲೆಕ್ಕ ಹೇಳಲಿ.

ನಮ್ಮ ಸರ್ಕಾರ 1,494 ಕೋಟಿ ರೂ. ವೆಚ್ಚದಲ್ಲಿ  ಪ.ಜಾ/ಪ.ಪಂ ವಿದ್ಯಾರ್ಥಿನಿಲಯಗಳ  ಸ್ವಂತ ಕಟ್ಟಡ,1,537 ಕೋಟಿ ರೂ. ವೆಚ್ಚದಲ್ಲಿ, 129 ವಸತಿ ಶಾಲಾ ಸಂಕೀರ್ಣ ನಿರ್ಮಾಣ,  16 ವಿಶ್ವವಿದ್ಯಾಲಯಗಳಲ್ಲಿ 116 ಕೋಟಿ ರೂ.ವೆಚ್ಚದಲ್ಲಿ ಸ್ನಾತಕೋತ್ತರ ವಸತಿನಿಲಯ ನಿರ್ಮಿಸಿದೆ. ಬಿಜೆಪಿ ಸರ್ಕಾರ ಏನು ಮಾಡಿದೆ?

ಎರಡುವರೆ ಲಕ್ಷ ಪ.ಜಾ/ಪ.ಪಂ ಫಲಾನುಭವಿಗಳು ವಿವಿಧ ಅಭಿವೃದ್ದಿ ನಿಗಮದಿಂದ ಪಡೆದಿದ್ದ ರೂ.581 ಕೋಟಿ ಸಾಲ ಮನ್ನಾ ಮಾಡಿದ್ದು ನಮ್ಮ ಸರ್ಕಾರ. ಬಿಜೆಪಿ ಸರ್ಕಾರ ಈ ಸಮುದಾಯದ ಫಲಾನುಭವಿಗಳ ಎಷ್ಟು ಸಾಲ ಮನ್ನಾ ಮಾಡಿದೆ? ಎಂದು ಕೇಳಿದ್ದಾರೆ.

ನಾನು ಮುಸ್ಲಿಮ್ ವಿರೋಧಿ ಎಂಬ ಬೊಬ್ಬಿಟ್ಟ ಪಕ್ಷದ ಅಭ್ಯರ್ಥಿಗಳ ಠೇವಣಿ ಜಪ್ತಿ ಮಾಡಿಸಿ ಉಪ ಚುನಾವಣೆಯಲ್ಲಿ ಮತದಾರರು ಉತ್ತರ ಕೊಟ್ಟಿದ್ದಾರೆ. ಈಗ ಬಿಜೆಪಿಯ ಕೆಲವು ತಥಾಕಥಿತ ದಲಿತ ನಾಯಕರು ನಾನು ದಲಿತ ವಿರೋಧಿ ಎಂದು ಕೂಗಾಡುತ್ತಿದ್ದಾರೆ, ಅವರಿಗೂ ಮತದಾರರೇ ಉತ್ತರ ನೀಡುತ್ತಾರೆ  ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಂದಗಿಯಲ್ಲಿ ಗೆದ್ದರೂ ಹಾನಗಲ್ನಲ್ಲಿ ಮುದುಡಿದ ‘ಕಮಲ’- ಬಿಜೆಪಿ ಸೋಲು-ಗೆಲುವಿಗೆ ಕಾರಣಗಳೇನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

Next Post

ಪೆಟ್ರೋಲ್, ಡಿಸೇಲ್ ತೆರಿಗೆ ಕಡಿತದಿಂದ ಸರ್ಕಾರಕ್ಕೆ “ನಷ್ಟ”ವಾಗುವುದಾದರೂ ಹೇಗೆ?

Related Posts

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
0

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಇಂದು ಮಹತ್ವದ ದಿನವಾಗಿದ್ದು, ಇಂದು ಎಲ್ಲಾ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ. ಈ ಹಿನ್ನಲೆಯಲ್ಲಿ ನಟ...

Read moreDetails
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
Next Post
ಪೆಟ್ರೋಲ್, ಡಿಸೇಲ್ ತೆರಿಗೆ ಕಡಿತದಿಂದ ಸರ್ಕಾರಕ್ಕೆ “ನಷ್ಟ”ವಾಗುವುದಾದರೂ ಹೇಗೆ?

ಪೆಟ್ರೋಲ್, ಡಿಸೇಲ್ ತೆರಿಗೆ ಕಡಿತದಿಂದ ಸರ್ಕಾರಕ್ಕೆ “ನಷ್ಟ”ವಾಗುವುದಾದರೂ ಹೇಗೆ?

Please login to join discussion

Recent News

Top Story

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..
Top Story

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

November 3, 2025
ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

ರೇಣುಕಾಸ್ವಾಮಿ ಕೊಲೆ ಕೇಸ್‌: ಡಿ ಗ್ಯಾಂಗ್‌ ಇಂದು ಬಿಗ್‌ ಡೇ..

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada