• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Government Fulfilling the ‘Guarantee Demand’ : ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ ಈಡೇರಿಸುತ್ತಾ ಸರ್ಕಾರ..?

Any Mind by Any Mind
May 30, 2023
in Top Story, ಅಭಿಮತ, ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
Government Fulfilling the ‘Guarantee Demand’ : ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ ಈಡೇರಿಸುತ್ತಾ ಸರ್ಕಾರ..?
Share on WhatsAppShare on FacebookShare on Telegram

ಚುನಾವಣೆಗೂ ಮುನ್ನ ಕಾಂಗ್ರೆಸ್‌ (congress) ನೀಡಿದ್ದ ಐದು ಗ್ಯಾರಂಟಿಗಳನ್ನ ಜಾರಿಗೊಳಿಸಲು ಸಿಎಂ ಸಿದ್ದರಾಮಯ್ಯ, (cmsiddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮೀನಾವೇಶ ಎಣಿಸುತ್ತಿದ್ದು, ಜನರಿಗೆ ನೀಡಿದ ಗ್ಯಾರಂಟಿಗಳನ್ನ ಜಾರಿ ಮಾಡುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (hdkumaraswamy) ಒತ್ತಾಯಿಸಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಕುಮಾರಸ್ವಾಮಿ ಟ್ವೀಟ್ ಸಾರಾಂಶ..

ಕಾಂಗ್ರೆಸ್ ಗೆ (congress) 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿಗೆ ಕಾಂಗ್ರೆಸ್‌  ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ?

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ. ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ.

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ 'ಗ್ಯಾರಂಟಿ ಬೇಡಿಕೆ'ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ @INCKarnataka ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ @siddaramaiah, ಶ್ರೀ @DKShivakumar ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? 1/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 30, 2023

ಅದು ಬಿಟ್ಟು ‘ಕೆಲ ಸಚಿವರು, ಶಾಸಕ’ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ. ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡುವ  ಮೂಲಕ ಕಾಂಗ್ರೆಸ್‌ ಗ್ಯಾರಂಟಿಗಳ ಜಾರಿ ಒತ್ತಾಯಿಸಿದ್ದಾರೆ.

Tags: cabinetCabinet MeetingcmsiddaramiahCongress GuaranteeDCM DK ShivakumarDKShivakumarHdKumaraswamyJDS Karnatakasiddaramaiahsiddaramaiah2023
Previous Post

BREAKING ಬೆಂಗಳೂರಿಗೆ ಹೊಸ ಪೊಲೀಸ್‌ ಕಮಿಷನರ್‌..!

Next Post

THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

THE Plane Emergency landing in Belgaum : ತರಬೇತಿಗೆ ಆಗಮಿಸುತ್ತಿದ್ದ ವಿಮಾನ ಬೆಳಗಾವಿಯಲ್ಲಿ ತುರ್ತು ಭೂಸ್ಪರ್ಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada