• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in Top Story
0
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು
Share on WhatsAppShare on FacebookShare on Telegram

ಬೆಂಗಳೂರು :

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದರೂ, ಈ ತೀರ್ಪು ಮುಂದಿನ ದಿನಗಳಲ್ಲಿ ದರ್ಶನ್ ಪರವಾಗಿಯೇ ಕೆಲಸ ಮಾಡುವ ಸಾಧ್ಯತೆ ಇದೆ ಎಂಬ ವಿಶ್ಲೇಷಣೆ ಇದೀಗ ಕಾನೂನು ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಸುಪ್ರೀಂ ಕೋರ್ಟ್ ಶುಕ್ರವಾರ ನೀಡಿದ ಆದೇಶದಲ್ಲಿ, ಪ್ರಕರಣದ 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಒಂದು ವರ್ಷದೊಳಗೆ ವಿಚಾರಣೆಯಲ್ಲಿ ಗಣನೀಯ ಪ್ರಗತಿ ಕಂಡುಬರದಿದ್ದರೆ ದರ್ಶನ್ ಅವರು ಮರುಬಾರಿಯೂ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ADVERTISEMENT
Senior Advocate Balan on Darshan Case : ದರ್ಶನ್​ಗೆ ಎಲ್ಲಾ ಬಾಗಿಲುಗಳು ತೆರೆಯುತ್ತಿವೆ.. #pratidhvani

ಈ ತೀರ್ಪಿನ ಬೆನ್ನಲ್ಲೇ ಪ್ರತಿಧ್ವನಿ ಜೊತೆ ಮಾತನಾಡಿದ ವಕೀಲ ಬಾಲನ್, “ಹೊರಗೆ ನೋಡಲು ಇದು ದರ್ಶನ್‌ಗೆ ಹಿನ್ನಡೆಯಂತೆ ಕಾಣಬಹುದು. ಆದರೆ ಕಾನೂನು ದೃಷ್ಟಿಯಿಂದ ನೋಡಿದರೆ ಸುಪ್ರೀಂ ಕೋರ್ಟ್ ನೀಡಿರುವ ಅವಕಾಶ ದರ್ಶನ್ ಪರವಾಗಿಯೇ ಇದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.“ಪ್ರಕರಣದಲ್ಲಿ ಒಟ್ಟು ನೂರಾರು ಸಾಕ್ಷಿಗಳಿದ್ದಾರೆ. ಇದರಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನೇ ಒಂದು ವರ್ಷದೊಳಗೆ ಪೂರ್ಣಗೊಳಿಸುವುದು ಅಷ್ಟು ಸುಲಭವಲ್ಲ. ಈಗಾಗಲೇ ಏಳು ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಹೀಗಾಗಿ ನ್ಯಾಯಾಲಯ ನಿಗದಿಪಡಿಸಿದ ಗಡುವಿನೊಳಗೆ ವಿಚಾರಣೆ ಪೂರ್ಣಗೊಳ್ಳುವ ಸಾಧ್ಯತೆ ಕಡಿಮೆ” ಎಂದು ಅವರು ವಿಶ್ಲೇಷಿಸಿದ್ದಾರೆ.

Darshan Bail Hearing At Supreme Court : "ದರ್ಶನ "ಕ್ಕೆ ಇನ್ನೂ ಒಂದು ವರ್ಷ ಕಾಯಬೇಕಾ..? #pratidhvani

ವಿಚಾರಣೆ ವಿಳಂಬವಾಗುತ್ತಿರುವುದರ ಬಗ್ಗೆ ಸ್ವತಃ ಸುಪ್ರೀಂ ಕೋರ್ಟ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣದ ಪ್ರಗತಿ ನಿಧಾನಗತಿಯಲ್ಲಿದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠ, ಅಗತ್ಯವಿದ್ದರೆ ದಿನನಿತ್ಯದ ವಿಚಾರಣೆ ನಡೆಸುವಂತೆ ಟ್ರಯಲ್ ಕೋರ್ಟ್‌ಗೆ ಸೂಚನೆ ನೀಡಿದೆ. ಇದಲ್ಲದೆ, ಪ್ರಕರಣದ ವಿಚಾರಣೆ ನಡೆಯುತ್ತಿರುವ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದಿರುವುದರಿಂದ ವಿಳಂಬವಾಗುತ್ತಿದೆ ಎಂಬ ಅಂಶವೂ ವಿಚಾರಣೆಯಲ್ಲಿ ಪ್ರಸ್ತಾಪವಾಗಿತ್ತು. ಈ ಹಿನ್ನೆಲೆ ಖಾಲಿ ಇರುವ ನ್ಯಾಯಾಧೀಶರ ಹುದ್ದೆಯನ್ನು ತಕ್ಷಣ ಭರ್ತಿ ಮಾಡುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿದೆ.

Pratap Simha on Siddaramaiah: ಪೀಡೆ ತೊಲಗೋಯ್ತು ಅಂತ ಜನ ತರ್ಪಣ ಬಿಡ್ತಾರೆ ಸಿದ್ದು ಸರ್ ಎಂದ ಪ್ರತಾಪ್ ಸಿಂಹ

ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ, “ಏಳು ತಿಂಗಳಾದರೂ ಪ್ರಮುಖ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿಲ್ಲ. ಪ್ರಕರಣದ ವೇಗ ತುಂಬಾ ನಿಧಾನವಾಗಿದೆ” ಎಂದು ವಾದ ಮಂಡಿಸಿದ್ದರು. ಆದರೆ, ಸಾಕ್ಷ್ಯ ವಿಚಾರಣೆ ನಡೆಯುತ್ತಿರುವ ಹಂತದಲ್ಲಿ ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿತು. ಈ ಬೆಳವಣಿಗೆಗಳ ಮಧ್ಯೆ, “ಒಂದು ವರ್ಷದ ಬಳಿಕ ವಿಚಾರಣೆಯ ಪ್ರಗತಿಯನ್ನು ಆಧರಿಸಿ ದರ್ಶನ್ ಮತ್ತೆ ಜಾಮೀನು ಪಡೆಯುವ ಅವಕಾಶ ಹೆಚ್ಚಿದೆ” ಎಂಬ ಅಭಿಪ್ರಾಯವನ್ನು ಹಲವು ಕಾನೂನು ತಜ್ಞರು ವ್ಯಕ್ತಪಡಿಸುತ್ತಿದ್ದಾರೆ.

Tags: celebrity casecourt decisionDarshanjudicial processkannada actor darshankarnataka newslawyer Balanlegal battlePratidhwani interviewSupreme Court Verdict
Previous Post

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

Next Post

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada