ಸದ್ದಿಲ್ಲದೆ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ತೆಗೆಯುವ ಪ್ರಯತ್ನ ನಡೆಯುತ್ತಿದೆಯಾ?

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆದಾಗಿನಿಂದಲೂ ಅವರನ್ನು ಕೆಳಗಿಳಿಸುವ ಪ್ರಯತ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಾಳೆಯದಿಂದ ನಿರಂತರವಾಗಿ ನಡೆದುಕೊಂಡೇ ಬರುತ್ತಿದೆ. ಆಗಾಗ ಅದು ಬಿರುಸಾಗಿ ಸಾಗುತ್ತದೆ. ಯಡಿಯೂರಪ್ಪ ತಮ್ಮ ನಾಲ್ಕು ದಶಕಗಳ ಅನುಭವವನ್ನು ಪಣಕ್ಕಿಟ್ಟು ಹೋರಾಡುತ್ತಲೇ ಬಂದಿದ್ದಾರೆ. ಇತ್ತೀಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದು ಮೂರು ದಿನ ಸಚಿವರು ಮತ್ತು ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದರು. ಅರುಣ್ ಸಿಂಗ್ ಅವರೇ ‘ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ’ … Continue reading ಸದ್ದಿಲ್ಲದೆ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ತೆಗೆಯುವ ಪ್ರಯತ್ನ ನಡೆಯುತ್ತಿದೆಯಾ?