ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್ಐಆರ್ ( FIR ) ದಾಖಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social media) ಪೋಸ್ಟ್ ( Post ) ಹಂಚಿಕೊಂಡಿರುವ ಉಪೇಂದ್ರ ( Actor upendra ) , ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕಿಷ್ಟು ದ್ವೇಷ? ಎಂದು ಪ್ರಶ್ನಿಸಿದ್ದಾರೆ.
ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ನೇರ ಪ್ರಸಾರಕ್ಕೆ ಬಂದಿದ್ದ ನಟ ಉಪೇಂದ್ರ ಮಾತನಾಡುವಾಗ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದಿದ್ದರು. ಹೊಲಗೇರಿ ಪದ ಬಳಕೆ ಬಗ್ಗೆ ದಲಿತ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇಂದು ರಾಮನಗರದಲ್ಲಿ ನಟ ಉಪ್ಪೇಂದ್ರ ವಿರುದ್ಧ ಪ್ರತಿಭಟಿಸಿದ್ದಾರೆ. ಜೊತೆಗೆ ಎರಡು ಪ್ರತ್ಯೇಕ ದೂರುಗಳನ್ನ ದಾಖಲಿಸದ್ದಾರೆ. ಎಫ್ಐಆರ್ ಕೂಡ ಹಾಕಲಾಗಿದೆ.
ಉಪೇಂದ್ರ ಅವರ ಹೇಳಿಕೆ ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ( Social welfare department ) ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ( Police Station ) ದೂರು ( complaint ) ದಾಖಲಿಸಿದ್ದಾರೆ, ಜೊತೆಗೆ ಬಿಆರ್ ಭಾಸ್ಕರ್ ರಾವ್ ಹಾಗೂ ಇನ್ನೂ ಕೆಲವರು ಹೊಸೂರು ಗೇಟ್ ಪೊಲೀಸ್ ಠಾಣೆಯಲ್ಲಿಯೂ ಉಪೇಂದ್ರ ವಿರುದ್ಧ ದೂರು ದಾಖಲು ಮಾಡಿದ್ದಾರೆ.
ತಮ್ಮ ಮಾತಿನಿಂದ ಹಲವರಿಗೆ ಆಗಿರುವ ಬೇಸರದ ಬಗ್ಗೆ ಅರಿತು ನಿನ್ನೆಯೇ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಕೇಳಿದ್ದ ನಟ ಉಪೇಂದ್ರ ಇಂದು (ಆಗಸ್ಟ್ 13) ಮತ್ತೊಂದು ಪೋಸ್ಟ್ ಹಾಕಿದ್ದು, ತಮ್ಮ ಬಡತನ ತುಂಬಿದ ಬಾಲ್ಯ ನೆನೆದಿರುವುದಲ್ಲದೆ, ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವಾಯ್ತೆ, ಏಕೆ ಇಷ್ಟೋಂದು ದ್ವೇಷ? ಎಂದು ಪ್ರಶ್ನಿಸಿದ್ದಾರೆ.
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ, ನಾನು ಎಂಥಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ಥುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ಧ್ವೇಷ?” ಎಂದು ಉಪೇಂದ್ರ ಪ್ರಶ್ನೆ ಮಾಡಿದ್ದಾರೆ. ಉಪೇಂದ್ರ ಪೋಸ್ಟ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಉಪೇಂದ್ರ ವಿರುದ್ಧ ದಾಖಲಾಗಿರುವ ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್, ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ, ಫೇಸ್ಬುಕ್ನಲ್ಲಿ ಉಪೇಂದ್ರ ಒಂದು ಸ್ಟೇಟ್ಮೆಂಟ್ ನೀಡಿದ್ದರು, ಅದು ಕೆಲ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದೆ. ನಟ ಉಪೇಂದ್ರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.
ಏನಿದು ವಿವಾದ?
ಪ್ರಜಾಕೀಯದ ವಾರ್ಷಿಕೋತ್ಸವದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದಿದ್ದಾಗ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದು ಉಪೇಂದ್ರ ಹೇಳಿದ್ದರು, ಉಪೇಂದ್ರರ ಈ ಮಾತಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ವಿಡಿಯೋ ಡಿಲೀಟ್ ಮಾಡಿದ ಉಪ್ಪಿ, ”ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು, ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ ಮತ್ತು ಈ ಮಾತಿಗೆ ಕ್ಷಮೆಯಿರಲಿ” ಎಂದು ಪೋಸ್ಟ್ ಹಾಕಿದ್ದರು.