ಖಾನ್ ಯೂನಿಸ್: ಹಮಾಸ್ ವಿರುದ್ಧ ದಿನದಿಂದ ದಿನಕ್ಕೆ ಯುದ್ಧವನ್ನು ತೀವ್ರಗೊಳಿಸುತ್ತಿರುವ ಇಸ್ರೇಲ್, ತನ್ನ ಭೂದಾಳಿಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ಗಾಜಾ ನಗರದ ಮೇಲೆ ಎರಡು ಕಡೆಯಿಂದ ದಾಳಿ ಆರಂಭಿಸಿ ಮತ್ತಷ್ಟು ಒಳಪ್ರದೇಶಗಳಿಗೆ ತೆರಳಿದೆ. ಈ ಮೂಲಕ ಇಡೀ ನಗರವನ್ನು ಸುತ್ತುವರೆದಿದೆ. ಜೊತೆಗೆ ಸುರಂಗ, ಕಟ್ಟಡದೊಳಗೆ ಅವಿತಿದ್ದ ಹಮಾಸ್ ಉಗ್ರರ ಜತೆ ಸೇನೆಯು ಚಕಮಕಿ ನಡೆಸಿ, ಹಲವು ಉಗ್ರರ ಹತ್ಯೆ ಮಾಡಿದೆ.

ಇದರ ನಡುವೆ ಹಮಾಸ್ ಉಗ್ರಗಾಮಿಗಳು ಇಸ್ರೇಲ್‌ನ ವಾಣಿಜ್ಯ ಕೇಂದ್ರವಾದ ಟೆಲ್ ಅವೀವ್‌ಗೆ ಸೇರಿದಂತೆ ಇಸ್ರೇಲ್‌ಗೆ ರಾಕೆಟ್‌ಗಳ ದಾಳಿಯನ್ನು ಮುಂದುವರೆಸಿದ್ದಾರೆ. ಇದೇ ವೇಳೆ, ಸಾವಿರಾರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಗಾಜಾ ಆಸ್ಪತ್ರೆಗಳ ಸನಿಹದಲ್ಲಿ ಇಸ್ರೇಲ್ ವಾಯುದಾಳಿ ಹೆಚ್ಚಿಸಿದೆ ಎಂದು ವಿಶ್ವಸಂಸ್ಥೆ ಅಸಮಾಧಾನ ವ್ಯಕ್ತಪಡಿಸಿದ್ದು, ಇಂಥ ದಾಳಿಗಳನ್ನು ನಿಲ್ಲಿಸುವಂತೆ ಬೆಂಜಮಿನ್ ನೆತನ್ಯಾಹು ಸರ್ಕಾರಕ್ಕೆಆಗ್ರಹಿಸಿದೆ.