• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಬೆಂಗಳೂರಿಗೆ ಪ್ರಧಾನಿ: ಮೋದಿ ಪ್ರಚಾರದ ಗೀಳಿಗೆ ಬೇಸತ್ತರೇ ಜನ?

ಕೃಷ್ಣ ಮಣಿ by ಕೃಷ್ಣ ಮಣಿ
August 25, 2023
in Top Story, ದೇಶ, ರಾಜಕೀಯ
0
ಮತ್ತೆ ಬೆಂಗಳೂರಿಗೆ ಪ್ರಧಾನಿ: ಮೋದಿ ಪ್ರಚಾರದ ಗೀಳಿಗೆ ಬೇಸತ್ತರೇ ಜನ?
Share on WhatsAppShare on FacebookShare on Telegram

ADVERTISEMENT

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರ್ತಿದ್ದಾರೆ. ಚಂದ್ರಯಾನ – 3 ಯಶಸ್ಸು ಸಾಧಿಸಿದ ಬಳಿಕ ಇಸ್ರೋ ವಿಜ್ಞಾನಿಗಳನ್ನು ಅಬಿನಂದಿಸಲು ಬೆಂಗಳೂರಿಗೆ ಬರುತ್ತಿದ್ದಾರೆ ಎನ್ನುವಾಗಲೇ ರಾಜಕೀಯದ ವಾಸನೆ ಬಡಿದಿತ್ತು. ಚಂದ್ರಯಾನ 3 ಯಶಸ್ವಿಯಾಗಿ ಚಂದ್ರನ ಮೇಲೆ ಸಾಫ್ಟ್​ ಲ್ಯಾಂಡಿಂಗ್​ ಆಗ್ತಿದ್ದ ಹಾಗೆ ಪ್ರಧಾನಿ ನರೇಂದ್ರ ಮೋದಿ, ಭಾಷಣ ಶುರು ಮಾಡಿದ್ದರು. ವಿಜ್ಞಾನಿಗಳು ಸಂಭ್ರಮದ ಬಗ್ಗೆ ಮಾತನಾಡುವ ಸಮಯದಲ್ಲಿ ಮೋದಿ ಮಾತು ಶುರು ಮಾಡಿಕೊಂಡಿದ್ದು, ವೀಕ್ಷಕರ ಮನಸ್ಸಿಗೆ ಘಾಸಿ ಉಂಟು ಮಾಡಿತ್ತು. ಇಸ್ರೋ ನೇರಪ್ರಸಾರದಲ್ಲಿ ನೋಡುತ್ತಿದ್ದ ಬರೋಬ್ಬರಿ 80 ಲಕ್ಷ ಜನರಲ್ಲಿ 40 ಲಕ್ಷ ಜನರು ಪ್ರಧಾನಿ ಮೋದಿ ಭಾಷಣ ಆರಂಭ ಆಗುತ್ತಿದ್ದ ಹಾಗೆ ಎಕ್ಸಿಟ್​ ಆಗಿದ್ದರು. ಇದರ ಜೊತೆಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬಂದು ರಾಜಕೀಯ ಮಾಡಲು ಮುಂದಾಗಿರುವುದು ಅನೇಕರದಲ್ಲಿ ಬೇಸರ ಮೂಡಿಸಿದೆ.

ಶನಿವಾರ ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್​ ಶೋ..!

ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಈಗಾಗಲೇ ಅಭಿನಂದನೆ ತಿಳಿಸಿದ್ದಾರೆ. ಆದರೆ ಬೆಂಗಳೂರಿಗೆ ಬಂದು ನೇರವಾಗಿ ಅಭಿನಂದನೆ ಸಲ್ಲಿಸಲಿದ್ದಾರೆ ಅನ್ನೋ ಮಾಹಿತಿ ಹೊರ ಬಿದ್ದಿತ್ತು. ಆ ಬಳಿಕ ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಲಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಶನಿವಾರ ಬೆಳಗ್ಗೆ ಗ್ರೀಸ್​ನಿಂದ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿರುವ ಪ್ರಧಾನಿ ಮೋದಿಯನ್ನು ಸುಮಾರು 5 ಸಾವಿರ ಜನ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಆ ಬಳಿಕ ಪೀಣ್ಯದಿಂದ ಇಸ್ರೋ ಕೇಂದ್ರದ ತನಕ 1 ಕಿಲೋ ಮೀಟರ್​ ರೋಡ್​ ಶೋ ನಡೆಸಲು ಬಿಜೆಪಿ ಹೈಕಮಾಂಡ್​ ರಾಜ್ಯ ನಾಯಕರಿಗೆ ಸೂಚನೆ ನೀಡಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ತಯಾರಿ ಮಾಡಿಕೊಳ್ತಿದ್ದಾರೆ.

ಮೋದಿ ಭದ್ರತೆಗೆ ಬೆಂಗಳೂರಿಗೆ ಬಂದಿಳಿದ SPG ಕಮಾಂಡೋ..!

ರೋಡ್ ಶೋ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್​ ಸೂಚನೆ ನೀಡಿದ ಬೆನ್ನಲ್ಲೇ ತಯಾರಿಗಲು ಆರಂಭವಾಗಿದೆ. ಮುಂಬರುವ ದಿನಗಳಲ್ಲಿ ಲೋಕಸಭೆ ಚುನಾವಣೆ ಇರೋದ್ರಿಂದ ರೋಡ್​ ಶೋ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಪೀಣ್ಯದಲ್ಲಿರುವ ಇಸ್ರೋ ಸಂಸ್ಥೆಗೆ ಈಗಾಗಲೇ SPG ಕಮಾಂಡೋ ಟೀಮ್ ಆಗಮಿಸಿದ್ದು, ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ನಾಯಕರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿರುವ ಇಸ್ರೋ ಕೇಂದ್ರ ಸ್ಥಳ ಪರಿಶೀಲ‌ನೆ ನಡೆಸಿದ್ರು.. ನಳಿನ್ ಕುಮಾರ್ ಕಟೀಲ್, ಆರ್.‌ಅಶೋಕ್, ದಾಸರಹಳ್ಳಿ ಶಾಸಕ ಮುನಿರಾಜು ಸೇರಿ ಅನೇಕರು ಹಾಜರಿದ್ದರು.

ಬಿಜೆಪಿ ಬಾವುಟ ಬೇಡ, ಕಾರ್ಯಕರ್ತರನ್ನು ಕರೆತನ್ನಿ..!

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯ್ತು. ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿ ಹಾಗೂ ಜಂಟಿ ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ವೇಳೆ ಭದ್ರತೆ ಕೈಗೊಳ್ಳಬೇಕಾದ ಕುರಿತಂತೆ ಚರ್ಚೆ ನಡೆಸಲಾಯ್ತು. ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರವರೆಗೆ ನಗರದ ಕೆಲವು ರಸ್ತೆಗಳ ಸಂಚಾರ ಮಾರ್ಗ ಬದಲಾಯಿಸಲು ನಿರ್ಧಾರ ಮಾಡಲಾಯ್ತು. ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸುವಂತೆ ಮನವಿ ಮಾಡಿದ್ದಾರೆ. ಇನ್ನೂ ರೋಡ್​ ಶೋ ವೇಳೆ ಯಾರೂ ಬಿಜೆಪಿ ಬಾವುಟ ತೋರಿಸದಂತೆ ಕಾರ್ಯಕರ್ತರಿಗೆ ಸೂಚಿಸುತ್ತೇವೆ. ಪ್ರಧಾನಿ ಮೋದಿ ಬಂದಾಗ ರಾಷ್ಟ್ರಧ್ವಜ ಮಾತ್ರ ಪ್ರದರ್ಶಿಸುವಂತೆ ತಿಳಿಸುತ್ತೇವೆ ಅಂತಾ ಬಿಜೆಪಿ ನಾಯಕರು ತಿಳಿಸಿದ್ದಾರೆ. ಆದರೆ ಚಂದ್ರಯಾನಕ್ಕೂ ಬಿಜೆಪಿ ರಾಜಕೀಯ ಲೆಕ್ಕಾಚಾರಕ್ಕೂ ಎಲ್ಲಿಯ ಸಂಬಂಧ ಅಂತಿದ್ದಾರೆ ಬೆಂಗಳೂರಿಗರು.

Tags: bengaluruBJPChandrayaan 3Congress PartyISRONarendra Modiನರೇಂದ್ರ ಮೋದಿಬಿಜೆಪಿ
Previous Post

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸಿಎಂ ಸೂಚನೆ.!

Next Post

ಬುದ್ದಿ ಕಲಿಯದ ಕಾಂಗ್ರೆಸ್ ನಾಯಕರು

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಬುದ್ದಿ ಕಲಿಯದ ಕಾಂಗ್ರೆಸ್ ನಾಯಕರು

ಬುದ್ದಿ ಕಲಿಯದ ಕಾಂಗ್ರೆಸ್ ನಾಯಕರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada