ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ವಿಚಾರ ಬಹುದೊಡ್ಡ ಮಟ್ಟಿಗೆ ವಿವಾದವನ್ನು ಸೃಷ್ಟಿಸಿದೆ ಇನ್ನು ಈ ವಿವಾದ ಸೃಷ್ಟಿಯಾಗುವುದಕ್ಕೆ ಪಶುಸಂಗೋಪನೆ ಇಲಾಖೆ ಸಚಿವರಾದಂತಹ ಕೆ ವೆಂಕಟೇಶ್ ಅವರ ಹೇಳಿಕೆ ಪ್ರಮುಖವಾದಂಥ ಕಾರಣವಾಗಿತ್ತು ಅದಾದ ನಂತರ ಕಾಂಗ್ರೆಸ್ನ ಪ್ರಮುಖ ನಾಯಕರು ಶಾಸಕರು ಸಚಿವರು ಕೂಡ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ವಿಚಾರಕ್ಕೆ ಸಕಾರಾತ್ಮಕವಾದ ಸ್ಪಂದನೆಯನ್ನು ನೀಡಿದರು

ಆದರೆ ಕಾಂಗ್ರೆಸ್ ನಾಯಕರು ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿಯ ನಾಯಕರು ಕಾಂಗ್ರೆಸ್ಸಿಗರ ವಿರುದ್ಧ ವ್ಯಾಪಕವಾದ ಆಕ್ರೋಶವನ್ನು ವ್ಯಕ್ತಪಡಿಸಿದ್ರು ಇದಾದ ನಂತರ ಒಂದು ವೇಳೆ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆದಿದ್ದೆ ಆದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಈ ಬಗ್ಗೆ ತಕ್ಕ ಪಾಠವನ್ನು ಕಲಿಸಲಾಗುತ್ತೆ ಅಂತ ಬಿಜೆಪಿಯ ನಾಯಕರು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದರು.
ಆದರೆ ಬಿಜೆಪಿಯ ನಾಯಕರ ಈ ಎಚ್ಚರಿಕೆಗೆ ತಲೆಕೆಡಿಸಿಕೊಳ್ಳದ ಕಾಂಗ್ರೆಸ್ಸಿಗರು ಗೋ ಹತ್ಯೆ ನಿಷೇಧ ಕಾಯ್ದೆ ವಾಪಸು ಪಡೆಯುವುದರಿಂದ ರೈತರಿಗೆ ಸಾಕಷ್ಟು ಉಪಯೋಗವಾಗಲಿದೆ ಒಂದು ಹಸು ಸಾವನ್ನಪ್ಪಿದಾಗ ಅವುಗಳ ವಿಲೇವಾರಿ ಮಾಡಲು ಕೂಡ ರೈತರು ಪರದಾಡುವ ಪರಿಸ್ಥಿತಿ ಇದೆ ಹಾಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವುದು ಉತ್ತಮವಾದ ನಿರ್ಧಾರ ಎಂದು ಸಮರ್ಥಿಸಿಕೊಂಡಿದ್ದರು. ಇದಕ್ಕೂ ಕೂಡ ಬಿಜೆಪಿ ನಾಯಕರು ವ್ಯಾಪಕವಾದ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು
ಇನ್ನು ಈ ಬಗ್ಗೆ ಮಾತನಾಡಿರುವ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಗೋಹತ್ಯೆ ಕಾಯ್ದೆಗೆ ತಿದ್ದುಪಡಿ ತರುವ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಗೋ ಹತ್ಯೆ ಕಾಯ್ದೆ ತಿದ್ದುಪಡಿ ಕುರಿತು ಎಲ್ಲಡೆ ಸುದ್ದಿ ಹಬ್ಬಿಸಲಾಗುತ್ತಿದೆ.ಸರ್ಕಾರದ ಮಟ್ಟದಲ್ಲಿ ಇಂಥ ಯಾವುದೇ ಪ್ರಸ್ತಾವನೆ ಇಲ್ಲ, ಈ ಕುರಿತು ಮಾತನಾಡುವುದು ಅಪ್ರಸ್ತುತ ಎಂದರು. ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಹೀಗಾಗಿ ಇದೀಗ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ಯಾವ ರೀತಿಯಾದ ನಿರ್ಧಾರವನ್ನ ತೆಗೆದುಕೊಳ್ಳಲಿದೆ ಅನ್ನೋದನ್ನ ಕಾದುನೋಡಬೇಕಾಗಿದೆ