ಬೆಂಗಳೂರು (Bengaluru): SCSP / TSP ಅನುದಾನವನ್ನು ಪಡೆದುಕೊಳ್ಳುವ ನೋಡಲ್ ಏಜೆನ್ಸಿಗಳು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ (H.C.Mahadevappa) ಅವರು ಹೇಳಿದರು.

ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 334 ರಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ SCSP / TSP ಅನುದಾನದ ಬಳಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳ ಸಭೆ ನಡೆಸಿದರು.
ಆಯಾ ವರ್ಷದ ಅವಧಿಯ ಅನುದಾನವನ್ನು ಆಯಾ ವರ್ಷವೇ ಖರ್ಚು ಮಾಡುವ ಮೂಲಕ ಅವರ ಪರಿಶಿಷ್ಟರ ಅಭಿವೃದ್ಧಿಗೆ ಶ್ರಮಿಸಬೇಕೆಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಎಲ್ಲಾ ಇಲಾಖೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮಾಡಬೇಕಾದ ಸಾಕಷ್ಟು ಕೆಲಸಗಳು, ಈ ಕುರಿತು ಸೂಕ್ತ ಅಧ್ಯಯನ ನಡೆಸಿ, ಪರಿಶಿಷ್ಟರ ಪರವಾದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
#Karnataka #bengaluru #hcmahadevappa #meeting