• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 16, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಬೆಂಗಳೂರು ಹಬ್ಬ -2026 ಉದ್ಘಾಟನೆ ಹಾಗೂ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ADVERTISEMENT

ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ. ಸಾಹಿತ್ಯ, ಕಲೆ, ಸಂಸ್ಕೃತಿ ಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ. ಎಲ್ಲ ಊರುಗಳಲ್ಲಿ ಹಮ್ಮಿಕೊಳ್ಳುವ ಜಾತ್ರೆ, ಉತ್ಸವಗಳು ಜಾತಿ , ಧರ್ಮಗಳನ್ನು ಮರೆತು ಮನುಷ್ಯರಾಗಬೇಕು ಎನ್ನುವ ಸಂದೇಶವನ್ನು ಸಾರುತ್ತದೆ. ಮನುಷ್ಯರು ಪರಸ್ಪರ ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಯಾವುದೇ ಧರ್ಮ ದ್ವೇಷಿಸಲು ಹೇಳುವುದಿಲ್ಲ ಎಂದರು.

ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ
ಕನ್ನಡ ನಾಡಿನಲ್ಲಿ ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಅನೇಕರು ಆಗಿಹೋಗಿದ್ದಾರೆ. ಇವರೆಲ್ಲರೂ ನಾವೆಲ್ಲ ಮನುಷ್ಯರೇ ಎಂದು ಸಾರಿ ಸಾರಿ ಹೇಳಿದವರು. ಬಸವಣ್ಣ ಜಾತಿ, ಧರ್ಮ, ವರ್ಗ, ಕಂದಾಚಾರ, ಮೌಢ್ಯಗಳು ತೊಲಗಬೇಕು ಎಂದು ಕರೆ ನೀಡಿದ್ದರು. ಹುಟ್ಟು ಮತ್ತು ಸಾವು, ಇವೆರಡರ ಮಧ್ಯೆ ನಾವೇನು ಮಾಡುತ್ತೇವೆ ಎನ್ನುವುದು ಮುಖ್ಯ. ಏನು ಸಾಧಿಸಿದೆವು, ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ . ಬೇರೆಯವರು ಅನುಸರಿಸುವ ರೀತಿಯಲ್ಲಿ ನಮ್ಮ ಹೆಜ್ಜೆ ಗುರುತುಗಳು ಇರಬೇಕೇ ಹೊರತು, ಅದನ್ನು ವಿರೋಧಿಸುವಂತಿರಬಾರದು ಎಂದರು.

ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು, ಭವ್ಯವಾದ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು. ನಾವೆಲ್ಲರೂ ಒಂದೇ ಎಂದು ಬಾಳಬೇಕಿರುವುದು ಅವಶ್ಯ ಎಂದರು.

ಪದ್ಮಿನಿ ರವಿ ಹಾಗೂ ನಂದಿನಿ ಆಳ್ವ ಅವರು ಪ್ರಾರಂಭಿಸಿದ ಬೆಂಗಳೂರು ಹಬ್ಬವನ್ನು ರವಿಚಂದರ್ ಮತ್ತು ಪ್ರಶಾಂತ್ ಪ್ರಕಾಶ್ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ. ಕನ್ನಡ ನಾಡಿನವರು ಕನ್ನಡ ಭಾಷೆಯನ್ನು ಕಲಿಯಬೇಕು. ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿಸಬೇಕು ಹಾಗೂ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ ಎಂದರು. ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು ಎಂದರು.

ಕನ್ನಡತನವನ್ನು ಬೆಳೆಸೋಣ.
ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಕನ್ನಡತನವನ್ನು ಬೆಳೆಸೋಣ. ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಬೆಂಗಳೂರಿನಲ್ಲಿ 1.40 ಕೋಟಿ ಜನ ನೆಲೆಸಿದ್ದಾರೆ. ನಾವೆಲ್ಲರೂ ಒಂದಾಗಿ ಬಾಳೋಣ, ಮನುಷ್ಯರಾಗೋಣ ಎಂದರು.

Tags: BangaloreBasavannaCM SiddaramaiahDK ShivakumarKannada FestivalKarnatakashivaraj kumarVidhanasouda
Previous Post

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

Next Post

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada