ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 55 ವರ್ಷದ ವಿಜ್ಞಾನಿಯೊಬ್ಬರು ದೆಹಲಿಯ ಶಾಸ್ತ್ರೀ ಭವನದ 7ನೇ ಮಹಡಿಯಿಂದ ಹಾರಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.
ಪೀರಾಘರಿ ನಿವಾಸಿ ಆಗಿರುವ 55 ವರ್ಷದ ವಿಜ್ಞಾನಿ ರಾಕೇಶ್ ಮಲಿಕ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ವಿಜ್ಞಾನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ವಿಚಾರಣೆ ಆರಂಭಿಸಿದ್ದಾರೆ.







