ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 30 ಕಡೆ ಬೆಳ್ಳಂಬೆಳಗ್ಗೆ ಉದ್ಯಮಿಗಳ ಮನೆಗಳ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆಗಳಲ್ಲಿ ಗೋವಾ – ಕರ್ನಾಟಕದ 600 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಉದ್ಯಮಿಗಳ ಮನೆಗಳ ಮೇಲೂ ಐಟಿ ದಾಳಿ ಯಾಗಿದ್ದು, ಅಂಬೆಸ್ಸಿ ಆರ್ಕೆಡ್ ಅಪಾರ್ಟ್ ಮೆಂಟ್ ನ 602 ಫ್ಲ್ಯಾಟ್ ನ ಮೇಲೆ ದಾಳಿ ಮಾಡಲಾಗಿದೆ. ನರಪತ್ ಸಿಂಗ್ ಚರೋಡಿ ಎಂಬುವರ ಮನೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.