ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಐಟಿ ಇಲಾಖೆ ಅಧಿಕಾರಿಗಳ ಬೇಟೆ ಜೋರಾಗಿದೆ. ಇಂದು ಮಾಜಿ ಸಿಎಂ ಎಸ್ಎಂ ಕೃಷ್ಣ ಸಹೋದರಿ ನಿವಾಸದ ಮೇಲೂ ಐಟಿ ದಾಳಿ ನಡೆದಿದೆ.

ಬೆಂಗಳೂರಿನ ಕೋರಮಂಗಲದ ಫಸ್ಟ್ ಬ್ಲಾಕ್ನಲ್ಲಿರುವ ಎಸ್.ಎಂ ಕೃಷ್ಣ ಸಹೋದರಿ ಎಸ್.ಎಂ ಸುನೀತಾ ನಿವಾಸ ಹಾಗೂ ಕಚೇರಿಗಳಲ್ಲಿ ಎಂಟು ಮಂದಿ ಐಟಿ ಅಧಿಕಾರಿಗಳು ತಲಾಶ್ ನಡೆಸಿದ್ದಾರೆ.
ಇತ್ತ ರಿಯಲ್ ಎಸ್ಟೇಟ್ ಉದ್ಯಮಿ ಹರಿರೆಡ್ಡಿ ಎಂಬವರ ಮನೆಯ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ .