ಬೆಂಗಳೂರು: ನಗರದ ಗ್ಲೋಬಲ್ ಸಿಟಿ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾತ ತೆರಿಗೆ ವಂಚನೆ ಆರೋಪ ಸಂಬಂಧ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ಜೀವನ್ ಭೀಮಾನಗರ ಬಳಿ ಇರುವ ಗ್ಲೋಬಲ್ ಸಿಟಿ ಇಂಟರ್ನ್ಯಾಷನಲ್ ಸ್ಕೂಲ್, ಗ್ಲೋಬಲ್ ಸಿಟಿ ಇಂಟರ್ನ್ಯಾಷನಲ್ ಕಾಲೇಜು ಹಾಗೂ ಸಂಸ್ಥೆಗಳ ಆಡಳಿತಾಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.











