ಬೆಂಗಳೂರು (Bengaluru): ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉತ್ತರ ಒಳನಾಡಿನ ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಹಾಗೂ ಮಾ.21 ರಂದು ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ಮಾ.20 ರಿಂದ 24 ರವವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮಾ.20ರ ಬಳಿಕ 23ರವರೆಗೆ ರಾಜ್ಯದ ನಾನಾ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಮಳೆಯ ತೀವ್ರತೆಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಬಿಸಿಲಿನ ಪ್ರಮಾಣವನ್ನು ನಿರ್ಧಾರ ಮಾಡಬಹುದಾಗಿದೆ. ಏಪ್ರಿಲ್ ತಿಂಗಳಲ್ಲಿ ಒಂದೆರಡು ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
#karnataka #bengaluru #rain #raininstate #3daysrain