ಯೋಧನೊಬ್ಬ ತನ್ನ ಮೂವರು ಸಹೋದ್ಯೋಗಿಗಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಠಾಣೆಯಲ್ಲಿ(ITBP) ನಡೆದಿದೆ.
ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಘಟನೆ ಸಂಭವಿಸಿದ್ದು ಪೇದೆ ಭೂಪೇಂದ್ರ ಸಿಂಗ್ ತನ್ನ ಸಹೋದ್ಯೋಗಿಗಳ ಮೇಲೆ ಮೊದಲು ಗುಂಡು ಹಾರಿಸಿ ಕೊಂದಿದ್ದು ನಂತರ ತಾನು ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ವೇಳೆ ಮಧ್ಯಪ್ರವೇಶಿಸಿದ ಇಬ್ಬರು ಅಧಿಕಾರಿಗಳಿಗೂ ಸಹ ಗುಂಡು ತಗುಲಿದ್ದು ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಭೂಪೇಂದ್ರ ಸಿಂಗ್ 8ನೇ ಬೆಟಾಲಿಯನ್ಗೆ ಸೇರಿದ್ದು ಪ್ರಸ್ತುತ ಜಮ್ಮು ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.