2024 ರ ಲೋಕಸಭಾ ಕ್ಷೇತ್ರದ ಚುನಾವಣೆ, ಮೋದಿ V/S Others. ಈ ಚುನಾವಣೆಗೆ ಎಲ್ಲಾ ಸಿದ್ಧತೆಗಳು ಆಗುತ್ತಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜನ ಯಾರಿಗೆ ಮತ ಹಾಕಬೇಕು ಎಂಬುದನ್ನು ಈಗಾಗಲೇ ನಿರ್ಧರಿಸಿದ್ದಾರೆ. ಈ ಬಾರಿ ನರೇಂದ್ರ ಮೋದಿ V/S Others ಅಖಾಡ.
ಇಲ್ಲಿ ಅಭ್ಯರ್ಥಿ ಮುಖ್ಯ ಅಲ್ಲ. ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಉಸ್ತುವಾರಿಗಳ ಬದಲಾವಣೆ ಆಗಿರುವುದು ನಿಜ. ಅದು ಅವರ ಪಕ್ಷಕ್ಕೆ ಬಿಟ್ಟಿದ್ದು. ನಮಗೆ ಮೋದಿ ಎದುರಿಸುವುದು ಮುಖ್ಯ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಉಸ್ತುವಾರಿ ನಮಗೆ ಲೆಕ್ಕ ಅಲ್ಲ. ಮೋದಿ ಮುಖ್ಯ ಎಂದು ಪ್ರತಿಕ್ರಿಯೆ ನೀಡಿದ್ದಾರೆ.