ಒಂದೆಡೆ ರಾಜ್ಯ ಸರ್ಕಾರವನ್ನು ಕೆಡವಲು ಬಿಜೆಪಿ (BJP) ಸರ್ವ ಪ್ರಯತ್ನವನ್ನು ನಡೆಸುತ್ತಿದೆ. ಹೀಗಾಗಿ ತಮ್ಮ ಶಾಸಕರಿಗೆ ನೂರಾರು ಕೋಟಿ ಆಫರ್ ಕೊಡುತ್ತಿದೆ ಎಂದು ಕಾಂಗ್ರೆಸ್ ನಾಯಕರು (Congress leaders) ಆರೋಪಿಸುತ್ತಿದ್ದಾರೆ. ಆದ್ರೆ ಇತ್ತ ಕಾಂಗ್ರೆಸ್ ಸರ್ಕಾರ ಪತನದ ಬಗ್ಗೆ ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadeesh Shettar) ಸ್ಫೋಟಕ ಭವಿಷ್ಯ ನುಡಿದಿದ್ದಾರೆ.ಜಗದೀಶ್ ಶೆಟ್ಟರ್ ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಯಾರು ಕೆಡವುವ ಅಗತ್ಯವಿಲ್ಲ. ಅದು ತಾನಾಗಿಯೇ ಪತನವಾಗಲಿದೆ. ಕಾಂಗ್ರೆಸ್ ಪಕ್ಷದ ಶಾಸಕರೇ ಸರ್ಕಾರ ಕೆಡವುತ್ತಾರೆ ಎಂದಿದ್ದಾರೆ. ಈಗಾಗಲೇ ಅನುದಾನದ ವಿಚಾರವಾಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ತಿರುಗಿಬಿದ್ದಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ, ಕಾಂಗ್ರೆಸ್ ಶಾಸಕರಿಂದಲೇ ಪತನವಾಗುವುದು ಖಚಿತ ಎಂದು ಹೇಳಿದ್ದಾರೆ. ಅನುದಾನದ ವಿಚಾರವಾಗಿ ನಿನ್ನೆಯಷ್ಟೇ ವಿಜಯಪುರದ ಶಾಸಕ ಗವಿಯಪ್ಪ ಅಸಮಾಧಾನ ಹೊರಹಾಕಿದ್ದರು ಮತ್ತು ಈ ಹಿಂದೆ ಶಾಸಕ ರಾಜುಕಾಗೆ ಕೂಡ ಈ ಬಗ್ಗೆ ಮಾತನಾಡಿದ್ದರು.