ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಖಂಡಿತವಾಗಿಯೂ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಶೆಟ್ಟರ್ಗೆ ಈ ಬಾರಿ ಟಿಕೆಟ್ ನೀಡುವಂತೆ ನಾನು ವರಿಷ್ಠರ ಬಳಿಯಲ್ಲಿ ಮನವಿ ಮಾಡಿದ್ದೇನೆ. ಒಂದೆರಡು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲವಾಗಿತ್ತು. ಅದು ಶೀಘ್ರದಲ್ಲಿಯೇ ಬಗೆಹರಿಯುತ್ತೆ ಎಂದು ಹೇಳಿದರು.
ಇದೇ ವೇಳೆ ಲಕ್ಷ್ಮಣ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಇಚ್ಛಿಸಿರುವ ವಿಚಾರವಾಗಿಯೂ ಮಾತನಾಡಿದ ಅವರು, ಲಕ್ಷ್ಮಣ ಸವದಿಗೆ ಪಕ್ಷ ಎಲ್ಲಾ ರೀತಿಯ ಸ್ಥಾನ ಮಾನ ನೀಡಿದೆ. ಆದರೂ ಅವರು ಇಂತಹದ್ದೊಂದು ನಿರ್ಧಾರ ಕೈಗೊಂಡಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.