
ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ನರ್ (Vice president) ಅವರು ನಿನ್ನೆ (ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ಪಾತ್ರದಲ್ಲಿ ಉಲ್ಲೇಖಿಸಿರುವಂತೆ ಅನಾರೋಗ್ಯ ಕಾರಣ ನೀಡಿ ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ರಾಷ್ಟ್ರಪತಿ ದೌಪದಿ ಮುರ್ಮು (Drowpadi murmu) ಅವರಿಗೆ ಜಗದೀಪ್ ಧನ್ಕರ್ (Jagadesh dhankar) ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ಅವರು ರಾಜೀನಾಮೆ ಪ್ರತದಲ್ಲಿ ಉಲ್ಲೇಖಿಸಿದ್ದಾರೆ.

ಜಗದೀಪ್ ಧನ್ಕರ್ ಅವರು ತಮಗೆ ಆರೋಗ್ಯ ಸಮಸ್ಯೆಯಾಗಿದ್ದು ವೈದ್ಯಕೀಯ ಸಲಹೆಯನ್ನು ಪಾಲಿಸುವುದು ಅನಿವಾರ್ಯವಾಗಿದೆ. ಹೀಗಾಗಿ ನಾನು ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.