2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ರಾಜ್ಯದಲ್ಲಿ ಚುನಾವಣೆ ರಣಕಹಳೆ ಮೊಳಗಿದೆ. ರಾಜಕೀಯ ನಾಯಕರು ಅಖಾಡಕ್ಕಿಳಿದು ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಎಲೆಲ್ಲೂ ಚುನಾವಣೆಯದ್ದೇ ಮಾತು ಕಥೆ ಶುರುವಾಗಿರುವ ಹೊತ್ತಲ್ಲೇ ಹುಬ್ಬಳ್ಳಿ-ಧಾರವಾಡ (Hubballi-Dharawada) ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ (Jagadish Shetter) ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ತಾರೆ ಎಂದು ಅಭಿಮಾನಿಯೊಬ್ಬರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಹುಬ್ಬಳ್ಳಿ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಎನ್. ಯಂಟ್ರುವಿ ಎಂಬುವವರು ರಕ್ತದಲ್ಲಿ ಪತ್ರ ಬರೆದು ಶೆಟ್ಟರ್ ಮೇಲಿನ ಅಭಿಮಾನ ಮೆರೆದಿದ್ದಾರೆ. ʻಮಾನ್ಯ ಜಗದೀಶ್ ಶೆಟ್ಟರ್ 100ಕ್ಕೆ ನೂರರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್.. ಅಂತ ಶೆಟ್ಟರ್ ಅಭಿಮಾನಿ ರಕ್ತದಲ್ಲಿ ಬರೆದಿದ್ದು, ಎಲ್ಲೆಡೆ ವೈರಲ್ ಆಗ್ತಿದೆ.