ಹುಬ್ಬಳ್ಳಿ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ 4 ದಿನಗಳು ಬಾಕಿ ಇರುವಾಗಲೇ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಜೋರಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿಯಿಂದ ಪಕ್ಷಾಂತರಗೊಂಡು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್ ಕೂಡ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಚರ್ಚೆ ಜೋರಾಗಿದೆ.

ಇಂತಹದ್ದೊಂದು ವಿಚಾರ ರಾಜಕೀಯ ವಲಯದಲ್ಲಿ ಜೋರು ಚರ್ಚೆ ಹುಟ್ಟಿಸಿರುವ ಬೆನ್ನಲ್ಲೇ ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನನಗೆ ಸಿಎಂ ಹುದ್ದೆ ಬೇಡ ಎಂದು ಹೇಳಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ನಲ್ಲಿದ್ದವರೇ ಸಿಎಂ ಆಗಲಿ. ನನ್ನದೇನು ಅಭ್ಯಂತರವಿಲ್ಲ ಎಂದಿದ್ದಾರೆ.
ಬಿಜೆಪಿಯವರು ಮಾತೆತ್ತಿದರೆ ಗುಜರಾತ್ ಮಾದರಿ ಎಂದು ಹೇಳುತ್ತಾರೆ. ಆದರೆ ಇದು ಕರ್ನಾಟಕ , ಗುಜರಾತ್ ಅಲ್ಲ, ಇಂದು ಲಿಂಗಾಯತರ ಸ್ವಾಭಿಮಾನವನ್ನು ಎತ್ತಿ ಹಿಡಿಯುವ ಸಮಾವೇಶ. ನಾನು ಕೇವಲ ಹುಬ್ಬಳ್ಳಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾದವನಲ್ಲ. ಇಡೀ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.