
ನಟ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿ 2 ತಿಂಗಳು ಕಳೆದಿದೆ. ಇಷ್ಟು ದಿನಗಳ ಕಾಲ ದರ್ಶನ್ ನೋಡಲು ಸೆಂಟ್ರಲ್ ಜೈಲಿಗೆ ಭೇಟಿ ನೀಡದ ನಟಿ ರಚಿತಾ ರಾಮ್, ಇಂದು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡುತ್ತಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ದರ್ಶನ್ ಭೇಟಿಗೆ ಸಮಯಾವಕಾಶ ತೆಗೆದುಕೊಂಡಿರುವ ನಟಿ ರಚಿತಾ ರಾಮ್, ಪರಪ್ಪನ ಅಗ್ರಹಾರ ಜೈಲಿಗೆ ಬರಲಿದ್ದಾರೆ ಎನ್ನುವ ಸುದ್ದಿ ನಟಿ ರಚಿತಾ ರಾಮ್ ಆಪ್ತ ಬಳಗದಿಂದ ಸಿಕ್ಕಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಚಿತಾ ದರ್ಶನ್ ಜೊತೆಗೆ ಚರ್ಚೆ ನಡೆಸಲಿದ್ದಾರೆ.
