ಕಲಬುರಗಿ:ಬಿಜೆಪಿ BJP) ರೀತಿ ಕಾಂಗ್ರೆಸ್ Congress)ಷಡ್ಯಂತ್ರ (Conspiracy)ಮಾಡಿದರೆ ಬಿಜೆಪಿಯವರಿಗೆ ಜೈಲುಗಳು ಸಾಕಾಗಲ್ಲ (Jails not enough for BJP)ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Lakshmi Hebbalkar)ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಷಡ್ಯಂತ್ರದಿಂದ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಲಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು.ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅನಿವಾರ್ಯತೆ ಇಲ್ಲ ಎಂದರು.
ರಾಜಕಾರಣಿಗಳನ್ನು ಜನ ಅನುಸರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಎಂಬುದನ್ನು ರಾಜಕಾರಣಿಗಳು ತಿಳಿದುಕೊಂಡು ಮಾತನಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು ಎಂದು ಕಿಡಿಕಾರಿದರು.