April 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ (Operation Sindhoora) ಎನ್ನುವ ಹೆಸರಿನಡಿಯಲ್ಲಿ ಪತ್ರ್ಯುತ್ತರ ನೀಡಿದೆ. ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ದೇವರ ಬಳಿ ಪೂಜೆ ಸಲ್ಲಿಸಲಾಗುತ್ತಿದೆ. ಈಗ ಕರ್ನಾಟಕದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ(May-09) ರಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಜಮೀರ್ ಅಹ್ಮದ್ ರವರು ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚಸಿದ್ದಾರೆ.
ಆಪರೇಷನ್ ಸಿಂಧೂರ (Operation Sindhoora) ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ (In All Temples) ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Minister Ramalingareddy)ರವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚಿಸಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ರವಾನಿಸಿದ್ದಾರೆ. ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಸಂದೇಶ ನೀಡಿದ್ದಾರೆ.

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹಿನ್ನೆಲೆ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚಸಿಲಾಗಿದೆ. ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದು ಮೆಚ್ಚುಗೆಗೆ ಕಾರಣವಾಗಿದೆ.