ಜಮ್ಮು ಕಾಶ್ಮೀರದ ಕಾರಾಗೃಹ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಹೇಮಂತ್.ಕೆ.ಲೋಹಿಯಾ(57) ಕತ್ತು ಸೀಳಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ವಿಷಯ ಬೆಳಕಿಗೆ ಬರುತ್ತಿದ್ದಂತೆ ತಲೆಮಾರಿಸಿಕೊಂಡಿರುವ ಮನೆಕೆಲಸದವನನ್ನು ಹುಡುಕಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
1992ರ ಬ್ಯಾಚ್ನ IPS ಅಧಿಕಾರಿಯಾಗಿರುವ ಲೋಹಿಯಾ ಜಮ್ಮುವಿನ ಹೊರವಲಯದಲ್ಲಿರುವ ಉದಯಾವಾಲಾದಲ್ಲಿ ನೆಲೆಸಿದ್ದರು. ಆಗಸ್ಟ್ ತಿಂಗಳಲ್ಲಿ ಅವರನ್ನು ಕಾರಾಗೃಹ ಇಲಾಖೆಯ ನಿರ್ದೇಶಕರಾಗಿ ನೇಮಿಸಲಾಗಿತ್ತು.
