• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಕೋಟೆ ನಿರ್ಮಿಸಿಕೊಂಡವರನ್ನು ಯಾರು ಕೊಲ್ಲಲು ಹೋಗುತ್ತಾರೆ?

ಪ್ರತಿಧ್ವನಿ by ಪ್ರತಿಧ್ವನಿ
January 3, 2026
in Top Story, ಕರ್ನಾಟಕ, ರಾಜಕೀಯ
0
ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಕೋಟೆ ನಿರ್ಮಿಸಿಕೊಂಡವರನ್ನು ಯಾರು ಕೊಲ್ಲಲು ಹೋಗುತ್ತಾರೆ?
Share on WhatsAppShare on FacebookShare on Telegram

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ADVERTISEMENT

ಅವರು ಡ್ರಾಮಾ ಮಾಸ್ಟರ್, ಕೋಟೆ ನಿರ್ಮಿಸಿಕೊಂಡವರನ್ನು ಯಾರು ಕೊಲ್ಲಲು ಹೋಗುತ್ತಾರೆ?

ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ

ನನಗೆ ಬಳ್ಳಾರಿ ಜನರ ಶಾಂತಿ, ನೆಮ್ಮದಿ ಬದುಕು ಮುಖ್ಯ

ಕಾಂಗ್ರೆಸ್ ಪಕ್ಷವು ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ

ಬೆಂಗಳೂರು, ಜ.03:

“ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

“ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

DkShivakumar on Central Govt: ಕೇಂದ್ರ ಸರ್ಕಾರಕ್ಕೆ ಓಪನ್ ಚಾಲೆಂಜ್ ಹಾಕಿದ DCM ಡಿಕೆ #pratidhvani

“ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ.” ಎಂದು ಹೇಳಿದರು.

“ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ” ಎಂದು ತಿಳಿಸಿದರು.

ಪ್ರಶ್ನೋತ್ತರ:

ಶಾಸಕರಾದ ಭರತ್ ರೆಡ್ಡಿ ಅವರು ಮನೆಗೆ ಬೆಂಕಿ ಹಚ್ಚುವ ಬಗ್ಗೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ನೀವು ಅದನ್ನು ಒಪ್ಪುತ್ತೀರಾ ಎಂದು ಕೇಳಿದಾಗ, “ಯಾರೂ ಮನೆಗೆ ಬೆಂಕಿ ಹಚ್ಚುವುದಿಲ್ಲ. ಅದನ್ನು ಒಪ್ಪುವುದಿಲ್ಲ. ಮೊದಲು ಅವರ ಹೇಳಿಕೆ ಏನಿದೆ ಎಂದು ಪರಿಶೀಲನೆ ಮಾಡುತ್ತೇನೆ” ಎಂದರು.

ಜನಾರ್ದನ ರೆಡ್ಡಿ ಮನೆ ಮುಂದೆ ಭರತ್ ರೆಡ್ಡಿ ಬೆಂಬಲಿಗರು ಪೋಸ್ಟರ್ ಅಂಟಿಸಿದ್ದರ ಬಗ್ಗೆ ಕೇಳಿದಾಗ, “ಅಲ್ಲಿ ಭರತ್ ರೆಡ್ಡಿ ಇದ್ದರಾ? ಜನಾರ್ದನ ರೆಡ್ಡಿ ಅವರ ಮನೆ ಮುಂದೆ ವಾಲ್ಮೀಕಿ ಅವರ ಪೋಸ್ಟರ್ ಇರಬಾರದಾ? ಇದ್ದರೆ ತಪ್ಪೇನಿದೆ?” ಎಂದು ತಿಳಿಸಿದರು.

ಗುಂಡು ಹಾರಿಸಿರುವುದು ಸರಿಯೇ ಎಂದು ಕೇಳಿದಾಗ, “ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ಶಾಂತಿ, ನೆಮ್ಮದಿ ನೆಲೆಸುವುದು ಮುಖ್ಯ

ಎಸ್ಪಿ ಸೇರಿದಂತೆ ಅಧಿಕಾರಿಗಳ ವರ್ಗಾವಣೆ ಬಗ್ಗೆ ಕೇಳಿದಾಗ, “ನನಗೆ ಈ ಘಟನೆ ತಿಳಿದ ತಕ್ಷಣೆ ಎಸ್ಪಿ ಜೊತೆ ಮಾತನಾಡಿದ್ದೇನೆ. ಎಸ್ಪಿ ಯಾವ ಪರಿಸ್ಥಿತಿಯಲ್ಲಿ ಮಾತನಾಡಿದರು ಎಂಬುದು ನನ್ನ ಅನುಭವಕ್ಕೇ ಬಂದಿದೆ. ಅವರು ಏನು ಉತ್ತರ ನೀಡಿದ್ದಾರೆ ಎಂಬುದು ಗೊತ್ತಿದೆ. ಈ ಹಿಂದೆ ಇದ್ದ ಎಸ್ಪಿ, ಐಜಿ ಮತ್ತು ಶಾಸಕರ ಜತೆಗೂ ಮಾತನಾಡಿದ್ದೇನೆ. ಬೇರೆ ನಾಯಕರ ಜತೆಗೂ ಮಾತನಾಡಿದ್ದೇನೆ. ಶ್ರೀರಾಮುಲು ಕೂಡ ನನಗೆ ಕರೆ ಮಾಡಿ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ನಾನು ತಕ್ಷಣವೇ ಪೊಲೀಸರಿಗೆ ಎಚ್ಚರಿಸಿದ್ದೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ಶಾಂತಿ ನೆಲೆಸುವುದು ಬಹಳ ಮುಖ್ಯ. ಬಳ್ಳಾರಿಯ ಜನ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದುಕೊಂಡಿದ್ದರು. ನಮಗೆ ಅದು ಮುಖ್ಯ. ಪಕ್ಷದ ಅಧ್ಯಕ್ಷನಾಗಿ ನನಗೆ ನನ್ನದೇ ಆದ ಜವಾಬ್ದಾರಿ ಇದೆ” ಎಂದು ತಿಳಿಸಿದರು.

ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಕೋಟೆ ನಿರ್ಮಿಸಿಕೊಂಡವರನ್ನು ಯಾರು ತಾನೇ ಕೊಲ್ಲಲು ಹೋಗುತ್ತಾರೆ?

ನನ್ನ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಡ್ರಾಮಾ ಮಾಸ್ಟರ್. ಅವರು ಮೊದಲೇ ಸಿನಿಮಾ ನಿರ್ಮಾಪಕರಲ್ಲವೇ? ಡ್ರಾಮಾ ಮಾಡುತ್ತಾರೆ. ಕೋಟೆ ನಿರ್ಮಿಸಿಕೊಂಡು ನೂರು ಜನ ಭದ್ರತಾ ಸಿಬ್ಬಂದಿ ಹೊಂದಿರುವವರನ್ನು ಯಾರು ಹತ್ಯೆ ಮಾಡುತ್ತಾರೆ? ಬದಲಿಗೆ ಜನರಿಗೆ ಬೇರೆಯದೇ ರೀತಿಯ ಭಯವಿದೆ. ಜನಾರ್ಧನ ರೆಡ್ಡಿ ಅವರ ಕುಟುಂಬದವರಿಗೆ ಸೋಲು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ. ಯಾರ ಇತಿಹಾಸ ಏನಿದೆ ಎಂಬುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು” ಎಂದು ತಿರುಗೇಟು ನೀಡಿದರು.

Tags: dk shivakumar and janardhan reddydk shivakumar gali janardhan reddydk shivakumar janardhan reddydk shivakumar mocks janardhan reddydk shivakumar on janardhan reddydk shivakumar slams janardhan reddydk shivakumar vs gali janardhan reddydk shivakumar vs janardhan reddygali janardhan reddy vs dk shivakumargali janardhan reddy with dk shivakumarjanardhan reddy on dk shivakumarjanardhan reddy slams dk shivakumarjanardhan reddy wish to dk shivakumarjanardhana reddy vs dk shivakumar
Previous Post

ಬೈಯ್ಯಪ್ಪನಹಳ್ಳಿ ಎನ್.ಜಿ.ಇ.ಎಫ್. ಜಾಗದಲ್ಲಿ 65 ಎಕರೆ ವೃಕ್ಷೋದ್ಯಾನ: ಎಂ ಬಿ ಪಾಟೀಲ

Next Post

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
Next Post
ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada