ಬೆಂಗಳೂರು (Bengaluru): ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah), ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DKShivakumar) ಅವರನ್ನು ಕೆಆರ್‌ಪಿಪಿ ಶಾಸಕ ಜನಾರ್ದನ ರೆಡ್ಡಿಯವರು (Gali Janardhana Reddy) ದಿಢೀರ್ ಆಗಿ ಭೇಟಿಯಾಗಿದ್ದಾರೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಲಿದ್ದು, ಇದರ ನಡುವೆ ಈ ಬೆಳವಣಿಗೆ ನಡೆದಿದೆ.
ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಜನಾರ್ದನ ರೆಡ್ಡಿ ಅವರು ಮಾತುಕತೆ ನಡೆಸಿದ್ದಾರೆ. ಇವರ ಈ ನಡೆ ಭಾರೀ ಕುತೂಹಲ ಮೂಡಿಸಿದೆ.
ರಾಜ್ಯ ಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಇದೆ. ಅಖಾಡದಲ್ಲಿ ಐದನೇ ಅಭ್ಯರ್ಥಿ ಕಣಕ್ಕಿಳಿದಿರುವುದು ಚುನಾವಣಾ ಕಣವನ್ನು ರಂಗೇರಿಸಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕಲು ಪ್ರಯತ್ನಗಳು ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಇನ್ನು ಭೇಟಿ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು, ಐತಿಹಾಸಿಕ ಆನೆಗೊಂದಿ ಉತ್ಸವವನ್ನ ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಮಾರ್ಚ್ ತಿಂಗಳಲ್ಲಿ ವೈಭವದಿಂದ ಆಚರಿಸಲಾಗುತ್ತೆ. ಈ ಸಂಬಂಧ ಸಿಎಂ,ಡಿಸಿಎಂಗೆ ಆಹ್ವಾನ ನೀಡಲು ಹೋಗಿದ್ದೆ ಎಂದರು.
ಭೇಟಿ ಸಂದರ್ಭದಲ್ಲಿ ರಾಜ್ಯಸಭೆ ಚುನಾವಣೆಯ ಬಗ್ಗೆ ಚರ್ಚೆ ನಡೆದಿದ್ಯಾ ಎಂಬ ಪ್ರಶ್ನೆಗೆ, ರಾಜ್ಯಸಭಾ ಚುನಾವಣೆಗೆ ಎಲ್ಲರೂ ಮನವಿ ಮಾಡಿದ್ದಾರೆ. ಸಿಎಂ, ಡಿಸಿಎಂ ಆದಿಯಾಗಿ ಎಲ್ಲ ಪಕ್ಷದವ್ರು ಮನವಿ ಮಾಡಿದ್ದಾರೆ. ನಾನು ಇನ್ನು ಏನೂ ತೀರ್ಮಾನ ಮಾಡಿಲ್ಲ ಎಂದರು.
#karnataka #bengaluru #siddaramaiah #dkshivakumar #janardhanareddy #rajyasabhaelection #political