ಬೀದರ್ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕೊಡದೆ ಇರುವ ಘಟನೆ ನಡೆದಿದೆ. ಇನ್ನು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆದು ದರ್ಪ ಮೆರೆಯಲಾಗಿದೆ ಎನ್ನುವ ವಿಚಾರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೀದರ್ನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದ ಪರೀಕ್ಷಾ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿ ತಾಯಿ ಕಿಡಿಕಾರಿದ್ದಾರೆ. ಸುಚ್ಚಿವೃತ್ ಎಂಬ ವಿದ್ಯಾರ್ಥಿ ಜನಿವಾರ ತೆಗೆಯಲು ಆಗಲ್ಲ ಎಂದಿದ್ದಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಣೆ ಮಾಡಿದ ಆರೋಪ ಕೇಳಿ ಬಂದಿದೆ. ಗುಂಪಾ ಬಳಿ ಇರುವ ಸಾಯಿ ಸ್ಫೂರ್ತಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀದರ್ನ ಚೌಬಾರ್ ನಿವಾಸಿಯಾಗಿರುವ ವಿದ್ಯಾರ್ಥಿ ಸುಚ್ಚಿವೃತ್ ಗಣೀತ ಪರೀಕ್ಷೆ ಬರೆಯಲು ತೆರಳಿದ್ದಾಗ ಜನಿವಾರ ತೆಗೆಯಬೇಕು, ಇಲ್ಲದಿದ್ದರೆ ನೀನು ಒಳಗಡೆ ನೇಣು ಹಾಕಿಕೊಂಡ್ರೆ ಏನು ಮಾಡೋದು ಎಂದು ಕೆಟ್ಟದಾಗಿ ಮಾತನಾಡಿದ್ರು ಎನ್ನಲಾಗಿದೆ.

ಮೊದಲ ಎರಡು ಎಕ್ಸಾಂ ಚನ್ನಾಗಿ ಆಗಿತ್ತು. ನಿನ್ನೆ ಗಣಿತ ಪರೀಕ್ಷೆ ಇತ್ತು, ಈ ವೇಳೆ ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಅವಕಾಶ ನೀಡಿಲ್ಲ. ಜನಿವಾರ ತೆಗಿ ಇಲ್ಲಾ ಅಂದ್ರೆ ಪರೀಕ್ಷೆಗೆ ಒಳಗೆ ಬಿಡಲ್ಲಾ ಎಂದಾಗ ಮಗ ಜನಿವಾರ ತೆಗೆಯಲ್ಲಾ ಎಂದಿದ್ದಾನೆ. ಹೀಗಾಗಿ ಪರೀಕ್ಷೆಗೆ ಅವಕಾಶ ನೀಡದಕ್ಕೆ ಮಗ ಮನೆಗೆ ವಾಪಸ್ ಬಂದಿದ್ದಾನೆ. ನಾನು ಕಲಬುರಗಿಗೆ ಹೋಗಿದ್ದೆ. ಬಂದ ಮೇಲೆ ಪೊಲೀಸ್ ಠಾಣೆಗೆ ಹೋಗುತ್ತೇನೆ. ನಮಗೆ ನ್ಯಾಯಬೇಕು ಎಂದು ವಿದ್ಯಾರ್ಥಿಯ ತಾಯಿ ನೀತಾ ಕುಲಕರ್ಣಿ ಮಾಧ್ಯಮಗಳ ಎದುರು ಅಳಲು ತೋಡಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘು ನಾಥ್ ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಿ.ಇ.ಟಿ. ಪರೀಕ್ಷೆ ನಡೆಯುತ್ತಿರುವಾಗ ಬ್ರಾಹ್ಮಣ ಜನಾಂಗದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ್ದ ಯಜ್ಯೋಪವೀತ (ಜನಿವಾರ) ವನ್ನು ಸಿ.ಇ.ಟಿ. ಪರೀಕ್ಷಾಧಿಕಾರಿಗಳು ಕತ್ತರಿಸಿ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇದರ ವಿರುದ್ಧವಾಗಿ ಬ್ರಾಹ್ಮಣ ಮುಖಂಡರು ತೀರ್ಥಹಳ್ಳಿಯಲ್ಲಿ ಈ ಘಟನೆಯನ್ನು ಖಂಡಿಸಿರುತ್ತಾರೆ. ನಾವೂ ಸಹ ಈ ಘಟನೆಯನ್ನು ಖಂಡಿಸುವುದಲ್ಲದೆ ಸರ್ಕಾರವು ಸಿ.ಇ.ಟಿ. ಪರೀಕ್ಷಾಧಿಕಾರಿಗಳನ್ನು ಕೂಡಲೆ ಅಮಾತನುಗೊಳಿಸಿ, ಬೇಷರತ್ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸುತ್ತಿದ್ದೇವೆ. ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಯ ವರ್ತನೆ ಅತ್ಯಂತ ಹೇಯವಾಗಿದೆ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು. ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದಿದ್ದಾರೆ. ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ, ವಿದ್ಯಾರ್ಥಿಯೊಬ್ಬನ ಇಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ ಎಂದಿದ್ದಾರೆ.
ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು ಎಂದಿದ್ದಾರೆ. ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ..? ಇದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮುಖ್ಯಮಂತ್ರಿಗಳು ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ, ಕಾಂಗ್ರೆಸ್ ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.