ಗಾಯಗೊಂಡಿರುವ ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಟಿ-20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಗಾಯದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯಿಂದ ಹೊರಬಿದ್ದಿದ್ದ ಜಸ್ ಪ್ರೀತ್ ಬುಮ್ರಾ ವಿಶ್ವಕಪ್ ಗೆ ಮುನ್ನ ಚೇತರಿಸಿಕೊಳ್ಳುವುದು ಅನುಮಾನ. ಈ ಹಿನ್ನೆಲೆಯಲ್ಲಿ ಟಿ-20 ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ.
ಬೆನ್ನು ನೋವಿನಿಂದ ಬಳಲುತ್ತಿರುವ ಜಸ್ ಪ್ರೀತ್ ಬುಮ್ರಾ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ತಂಡದಿಂದ ಹೊರಬಿದ್ದಿದ್ದಾರೆ.
ಬುಮ್ರಾ ಅವರಿಗೆ 6 ತಿಂಗಳ ವಿಶ್ರಾಂತಿಗೆ ಸೂಚಿಸಲಾಗಿದ್ದು, ಅವರು ಟಿ-20 ವಿಶ್ವಕಪ್ ಗೆ ಹೊರಡುವ ಭಾರತ ತಂಡದ ಜೊತೆ ಪ್ರಯಾಣಿಸುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.