• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ(Society) ಅಸಮಾನತೆ ಸೃಷ್ಟಿಯಾಗಿದೆ:ಸಿಎಂ‌ಸಿದ್ದರಾಮಯ್ಯ (CMSiddaramaiah)

ಪ್ರತಿಧ್ವನಿ by ಪ್ರತಿಧ್ವನಿ
June 19, 2024
in ರಾಜಕೀಯ, ಸ್ಟೂಡೆಂಟ್‌ ಕಾರ್ನರ್
0
ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ(Society) ಅಸಮಾನತೆ ಸೃಷ್ಟಿಯಾಗಿದೆ:ಸಿಎಂ‌ಸಿದ್ದರಾಮಯ್ಯ (CMSiddaramaiah)
Share on WhatsAppShare on FacebookShare on Telegram

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿ.ಎಂ

ADVERTISEMENT

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಮಕ್ಕಳು ಮೌಡ್ಯದಿಂದ ಹೊರಗೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು: ಸಿ.ಎಂ ಕರೆ

ಬೆಂಗಳೂರು ಜೂ 19: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು.

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ ಎಂದರು.

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.

ಬುದ್ದ, ಬಸವಣ್ಣ ಎಷ್ಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

SDLC ಮತ್ತು PUC ಯಲ್ಲಿ ಹೆಚ್ಚು ಅಂಕ ಗಳಿಸಿದ, ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಈ ವಿದ್ಯಾರ್ಥಿಗಳ ಸಾಧನೆಗೆ ನೆರವಾದ ಎಲ್ಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು . ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು.

ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು ಎಂದು ಕರೆ ನೀಡಿದರು.

ನಮ್ಮ ಸಂವಿಧಾನದ ಕಾರಣದಿಂದ ಶಿಕ್ಷಣ ಈಗ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಸರ್ವರಿಗೂ ಸಮಾನವಾದ ಗುಣಮಟ್ಟದ ಶಿಕ್ಷಣ
ಕ್ರೈಸ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು.
ಈ ಐತಿಹಾಸಿಕ ಕಾರ್ಯಕ್ರಮದ ಮಹತ್ವವನ್ನು ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ವಿವರಿಸಿದರು.
ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ, ಪರಿಷತ್ ಸದಸ್ಯರಾದ ಸುದಾಮ್ ದಾಸ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್

ಹೆಣ್ಣು ಮಕ್ಕಳ ಪ್ರಗತಿ ಖುಷಿ ಆಗತ್ತೆ

ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ ಎಂದರು.

Previous Post

ನಟ ದರ್ಶನ್ ಕೇಸ್ ಗೆ ತಿರುವು ಕೊಟ್ಟ ಸಿಎಂ ಸಿದ್ದರಾಮಯ್ಯ

Next Post

ಚನ್ನಪಟ್ಟಣದಲ್ಲಿ ಬೈ ಎಲೆಕ್ಷನ್​ಗೆ (By-Election) ಸ್ಪರ್ಧೆ ಸುಳಿವು ಕೊಟ್ಟ DKS

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಚನ್ನಪಟ್ಟಣದಲ್ಲಿ ಬೈ ಎಲೆಕ್ಷನ್​ಗೆ (By-Election) ಸ್ಪರ್ಧೆ ಸುಳಿವು ಕೊಟ್ಟ DKS

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada