ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಇತ್ತೀಚೆಗೆ ತಮ್ಮ ಹೇಳಿಕೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಸೌಂಡ್ ಮಾಡ್ತಿದ್ದಾರೆ.
ಜಯ ಮೃತ್ಯುಂಜಯ ಸ್ವಾಮೀಜಿಯ ಭಕ್ತರು ಪಂಚಮಸಾಲಿ ಶ್ರೀಗಳು ಸಿಎಂ ಆಗಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿಬಿಟ್ಟಿದ್ದು, ಈ ಕುರಿತಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.
ನಾನು ರಾಜಕೀಯಕ್ಕೆ ಬರುವುದಿಲ್ಲ. ನಾನು ಕಿಂಗ್ ಆಗಲ್ಲ, ಆದರೆ ಕಿಂಗ್ ಮೇಕರ್ ಆಗುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾರೆ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರಲ್ಲ. ರಾಜಕೀಯ ಮಾಡೋದಕ್ಕೆ ನಮ್ಮ ಸಮಾಜದ ನಾಯಕರಿದ್ದಾರೆ ಎಂದು ಹೇಳಿದ್ದಾರೆ.