ಹಿರಿಯ ನಟಿ ಜಯಕುಮಾರಿ ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಮಾರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಜಯಕುಮಾರಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿರುವುದರಿಂದ ಅವರಿಗೆ ತುರ್ತು ನೆರವಿನ ಅಗತ್ಯವಿದೆ.
1660ರಲ್ಲಿ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ ಜಯಕುಮಾರಿ, 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಚಿಕಿತ್ಸೆಗೂ ಹಣವಿಲ್ಲದೇ ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ.